News Kannada
Thursday, September 29 2022

ಕರ್ನಾಟಕ

ಬಂಡೀಪುರ-ಕೇರಳ ರಾತ್ರಿ ಸಂಚಾರಕ್ಕಿಲ್ಲ ಅನುಮತಿ - 1 min read

Photo Credit :

ಬಂಡೀಪುರ-ಕೇರಳ ರಾತ್ರಿ ಸಂಚಾರಕ್ಕಿಲ್ಲ ಅನುಮತಿ

ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಜಾರಿಯಿರುವ ರಾತ್ರಿ ಸಂಚಾರ ನಿಷೇಧವನ್ನು ತೆರವುಗೊಳಿಸಲು ವಯನಾಡು ಸಂಸದ ರಾಹುಲ್ ಗಾಂಧಿ ಪ್ರಯತ್ನ ಮುಂದುವರಿಸಿದ್ದಾರೆ. ಲೋಕಸಭೆಯಲ್ಲಿ ರಾಹುಲ್ ಗಾಂಧಿ ನಿಷೇಧ ತೆರವುಗೊಳಿಸುವ ಕುರಿತು ಪ್ರಶ್ನೆ ಕೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ 766 ಯಲ್ಲಿ ರಾತ್ರಿ ಸಂಚಾರವನ್ನು ನಿಷೇಧ ಮಾಡಿರುವುದರಿಂದ ಉತ್ತರ ಮಲಬಾರ್ ಭಾಗದ ಜನರು ತೊಂದರೆಗೆ ಒಳಗಾಗಿದ್ದಾರೆ.

ರಾತ್ರಿ ಸಂಚಾರ ತೆರವುಗೊಳಿಸಿ ಪ್ರಾಣಿಗಳಿಗೆ ತೊಂದರೆಯಾಗದಂತೆ ಮೇಲ್ಸೇತುವೆ ಮುಂತಾದ ಯೋಜನೆಗಳನ್ನು ಮಾಡಲು ಕೇಂದ್ರ ಸರ್ಕಾರ ಕ್ರಮ ತೆಗೆದುಕೊಂಡಿದೆ. ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲು ಆಸಕ್ತಿಯಿದೆಯೇ ಎಂಬೆಲ್ಲ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳಿದ್ದಾರೆ.

ಇದಕ್ಕೆ ಖಡಕ್ ಆಗಿ ಉತ್ತರಿಸಿರುವ ಕೇಂದ್ರ ಸರ್ಕಾರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಬಂಡೀಪುರ ರಾಷ್ಟ್ರಿಯ ಉದ್ಯಾನವನದಲ್ಲಿ ರಾತ್ರಿ ಸಂಚಾರ ನಿಷೇಧದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ತೆರವುಗೊಳಿಸುವ ಯಾವ ಪ್ರಸ್ತಾಪವೂ ಇಲ್ಲ ಎಂದು ತಳ್ಳಿ ಹಾಕಿದ್ದಾರೆ.

2009ರಲ್ಲಿ ರಾತ್ರಿ ಸಂಚಾರ ನಿಷೇಧ ವಿಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಮನೋಜ್‍ಕುಮಾರ್ ಮೀನಾ ಆದೇಶ ಹೊರಡಿಸಿದ್ದರು. ಅದನ್ನೇ ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವಿವಿಧ ಹಂತಗಳಲ್ಲಿ ಎತ್ತಿ ಹಿಡಿದಿದೆ. ಆದರೂ ಕೇರಳದ ವಿವಿಧ ಜನಪ್ರತಿನಿಧಿಗಳು ಮತ್ತೇ ಮತ್ತೆ ಪ್ರಯತ್ನಿಸುತ್ತಿರುವುದು ದುರಂತ. ರಾಹುಲ್ ಗಾಂಧಿಯಂತ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರ ಈ ರೀತಿ ನಡೆ ಪರಿಸರಕ್ಕೆ ಮಾರಕವಾಗಲಿದೆ ಎಂಬುದು ಪರಿಸರ ಪ್ರೇಮಿಗಳ ಬೇಸರದ ನುಡಿಯಾಗಿದೆ.

See also  ತರಗತಿಗಳನ್ನು ಆರಂಬಿಸಲು ಸರ್ಕಾರಕ್ಕೆ ರುಪ್ಸಾ ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು