News Kannada
Saturday, October 01 2022

ಕರ್ನಾಟಕ

ಗಲಭೆ ಪ್ರಕರಣ : ಉಭಯ ಕಡೆಯ ಕೇಸ್‍ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ - 1 min read

Photo Credit :

ಗಲಭೆ ಪ್ರಕರಣ : ಉಭಯ ಕಡೆಯ ಕೇಸ್‍ಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ

ಮಡಿಕೇರಿ: ಟಿಪ್ಪು ಜಯಂತಿಯ ಸಂದರ್ಭ ಸಂಭವಿಸಿದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಒಂದು ಕಡೆಯ ಪ್ರಕರಣವನ್ನು ಮಾತ್ರ ರದ್ದುಗೊಳಿಸಿರುವುದು ಸರಿಯಾದ ಕ್ರಮವಲ್ಲವೆಂದು ಟೀಕಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ, ಎರಡೂ ಕಡೆಯ ಕೇಸ್‍ಗಳನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ‘ಟಿಪ್ಪು ಜಯಂತಿ’ಯನ್ನು ರದ್ದುಗೊಳಿಸುವ ಮೂಲಕ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣದ ಮೊದಲ ಹೆಜ್ಜೆಯನ್ನಿರಿಸಿದೆ ಎಂದು ಆರೋಪಿಸಿದರು.

ವಿಧಾನಸಭೆಯ ಮೊದಲ ಅಧಿವೇಶನದಲ್ಲಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿದ್ದರಾದರು, ಟಿಪ್ಪು ಜಯಂತಿಯನ್ನು ರದ್ದು ಮಾಡುವ ಮೂಲಕ ತಮಗಿರುವ ಧರ್ಮ ಜಾತಿಗಳೆಡೆಗಿನ ಭೇದ ಭಾವವನ್ನು ತೋರಿರುವುದಾಗಿ ಟೀಕಿಸಿದರು.

ಬ್ರಿಟಿಷರ ವಿರುದ್ಧ ಹೋರಾಟವನ್ನು ಮಾಡುವ ಮೂಲಕ ಸ್ವಾತಂತ್ರ್ಯದ ಕಿಚ್ಚು ಮೂಡಿಸಿದ್ದ ಟಿಪ್ಪು ಸುಲ್ತಾನ್, ತನ್ನ ಆಡಳಿತದಲ್ಲಿ ಸಮಾಜ ಸುಧಾರಣೆಯ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದ. ಇಂತಹ ಮಹಾನ್ ವ್ಯಕ್ತಿಯನ್ನು ಜಾತಿ ಧರ್ಮಗಳ ಆಧಾರದಲ್ಲಿ ನೋಡುವ ಮೂಲಕ ಜಯಂತಿಯನ್ನು ರದ್ದುಗೊಳಿಸಿರುವ ಕ್ರಮ ಖಂಡನೀಯವೆಂದು ತಿಳಿಸಿದರು.

ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿದೆ. ಇವುಗಳಲ್ಲಿ ಯಾವುದೋ ಒಂದು ಕಡೆಯ ಪ್ರಕರಣಗಳನ್ನಷ್ಟೆ ರದ್ದು ಪಡಿಸುವ ಕ್ರಮ ಸರಿಯಲ್ಲ. ಆ ಸಂದರ್ಭ ದಾಖಲಾಗಿರುವ ಎರಡೂ ಕಡೆಗಳ ಎಲ್ಲ ಪ್ರಕರಣಗಳನ್ನು ರದ್ದು ಪಡಿಸಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.

ರಾಜ್ಯಕ್ಕೆ ಮುಜುಗರ: ಸರ್ಕಾರ ರಚಿಸುವುದಕ್ಕೆ ಅಗತ್ಯವಾದ ಸ್ಥಾನಗಳನ್ನು ಪಡೆಯಲು ಬಿಜೆಪಿಯು ಶಾಸಕರ ಖರೀದಿಯಂತಹ ವಾಮಮಾರ್ಗವನ್ನು ಅನುಸರಿಸುವ ಮೂಲಕ ರಾಜ್ಯ ರಾಜಕಾರಣವನ್ನು ಅವಮಾನಿಸಿದೆ. ಈ ರೀತಿಯ ರಾಜಕೀಯ ಬೆಳವಣಿಗೆಯಿಂದ ಕರ್ನಾಟಕ ಮುಜುಗರಕ್ಕೆ ಒಳಗಾಗಿದೆ ಎಂದು ಮಂಜುನಾಥ್ ಕುಮಾರ್ ಅಭಿಪ್ರಾಯಪಟ್ಟರು.

ಸÀಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಬಿಜೆಪಿ ಸರ್ಕಾರ ತಡೆಹಿಡಿದು, ತಮ್ಮ ಇಷ್ಟಕ್ಕೆ ಬಂದಂತೆ ಮತ್ತೊಮ್ಮೆ ವರ್ಗಾವಣೆಗೆ ಮುಂದಾಗಿದೆ. ತಾನು ಅಧಿಕಾರಕ್ಕೆ ಬರಲು ಶಾಸಕರ ಖರೀದಿಗೆ ಬಳಸಿರಬಹುದಾದ ಮೊತ್ತವನ್ನು ಮರಳಿ ಪಡೆಯುವ ಹುನ್ನಾರ ಇದರಲ್ಲಿ ಅಡಗಿದೆ ಎನ್ನುವ ಸಂಶಯ ಮೂಡುತ್ತಿದೆ ಎಂದು ಆರೋಪಿಸಿದರು.
ಕಳೆದ ಸಾಲಿನ ಮುಂಗಾರಿನ ಪ್ರಾಕೃತಿಕ ವಿಕೋಪದಿಂದ ಕೊಡಗು ಸಾಕಷ್ಟು ಕಷ್ಟ ನಷ್ಟಗಳನ್ನು ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಮೊದಲು ಸಂಪುಟವನ್ನು ವಿಸ್ತರಿಸುವ ಮೂಲಕ ಸಮಸ್ಯೆಗಳ ಬಗೆಹರಿಕೆಯ ಕೆಲಸಕಾರ್ಯಗಳಿಗೆ ಆದ್ಯ ಗಮನ ಹರಿಸುವ ಅಗತ್ಯವಿದೆ. ಪ್ರಸ್ತುತ ಸಮಸ್ಯೆಗಳತ್ತ ಗಮನ ಹರಿಸದ ಶಾಸಕರು ಸಚಿವ ಸ್ಥಾನಕ್ಕಾಗಿ ಬೆಂಗಳೂರು, ದೆಹಲಿಗೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದರು.

ಉದ್ಯಮಿಗಳಿಗೆ ಸಂಕಷ್ಟ: ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತೆಗೆದುಕೊಂಡ ನೋಟು ಅಮಾನ್ಯೀಕರಣ, ನಗದು ರಹಿತ ವಹಿವಾಟು ಮತ್ತು ಜಿಎಸ್‍ಟಿ ತೆರಿಗೆ ಪದ್ಧತಿ ಅವೈಜ್ಞಾನಿಕವಾಗಿದ್ದು, ಇದು ಆರ್ಥಿಕ ಪರಿಸ್ಥಿತಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಕೇಂದ್ರದ ಈ ಕ್ರಮಗಳಿಂದ ಬಡವರು ಮತ್ತು ಮಧ್ಯಮವರ್ಗದವರು ಮಾತ್ರ ಸಂಕಷ್ಟಕ್ಕೆ ಸಿಲುಕಿರಬಹುದೆಂದು ಆರಂಭದಲ್ಲಿ ತೋರಿತ್ತು. ಆದರೆ, ಬೃಹತ್ ಉದ್ಯಮಿಗಳಿಗೂ ಇದರಿಂದ ಹೊಡೆತ ಬಿದ್ದಿದ್ದು, ಕಾಫಿ ಉದ್ಯಮಿ ಸಿದ್ಧಾರ್ಥ ಅವರ ಆತ್ಮಹತ್ಯೆಗೆ ಕೇಂದ್ರದ ಧೋರಣೆಗಳು ಕಾರಣವಾಗಿದೆ ಎಂದು ಮಂಜುನಾಥ್ ಕುಮಾರ್ ಆರೋಪಿಸಿದರು.

See also  ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 6 ಮಂದಿಗೆ ಕೊರೋನಾ ಪಾಸಿಟಿವ್

ಸೋಲಿಗೆ ಕಾರಣ ಇವಿಎಂ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಳ್ಳುವುದಕ್ಕೆ ಬಿಜೆಪಿ ಪಕ್ಷ ಕಾರಣವಲ್ಲ. ಬದಲಾಗಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‍ಗಳೆಂದು ಅವರು ಅಭಿಪ್ರಾಯಪಟ್ಟರು.

ಮುಂದಿನ ಸಾಲಿನ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆಯುವ ಗ್ರಾಮ ಪಂಚಾಯ್ತಿ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಅಗತ್ಯ ಸಿದ್ಧತೆಗಳಲ್ಲಿ ತೊಡಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಜಿಲ್ಲಾ ವಕ್ತಾರ ಟಿ.ಈ.ಸುರೇಶ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ, ಸಾಮಾಜಿಕ ಜಾಲ ತಾಣ ಘಟಕದ ಜಿಲ್ಲಾ ಉಸ್ತುವಾರಿ ಹೊಸೂರು ಸೂರಜ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು