News Kannada
Wednesday, September 28 2022

ಕರ್ನಾಟಕ

ಮಂಡ್ಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಬಿ ವೆಂಕಟೇಶ್ - 1 min read

Photo Credit :

ಮಂಡ್ಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಬಿ ವೆಂಕಟೇಶ್

ಮಂಡ್ಯ: ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ವಿ ವೆಂಕಟೇಶ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎನ್ ಮಂಜುಶ್ರೀ ಅವರು ವರ್ಗವಣೆಯಾಗಿರುವ ಹಿನ್ನೆಯಲ್ಲಿ ನೂತನ ಜಿಲ್ಲಾಧಿಕಾರಿಗೆ ಹೂಗುಚ್ಚ ನೀಡುವ ಮೂಲಕ ನೂತನ ಜಿಲ್ಲಾಧಿಕಾರಿಯನ್ನು ಸ್ವಾಗತಿಸಿದರು.

2009ರ ಬ್ಯಾಚ್‍ನ ಅಧಿಕಾರಿಯಾದ ಡಾ.ಎಂ.ಬಿ ವೆಂಕಟೇಶ್ ರವರು ಈ ಹಿಂದೆ ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿದ್ದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆ ಯಾಗಿರುವುದರಿಂದ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತೇವೆ. ಜಿಲ್ಲೆಯ 7 ತಾಲ್ಲೂಕುಗಳಲ್ಲಿಯೂ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತದೆ. ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವು, ನೀರು ಪೂರೈಸಲು ಜಿಲ್ಲಾಡಳಿತ ಕ್ರಮವಹಿಸುತ್ತದೆ. ಕಂದಾಯ ಇಲಾಖೆಯಲ್ಲಿ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುತ್ತೇವೆ ಎಂದು ತಿಳಿಸಿದರು.

ಕಾನೂನು ಸುವ್ಯವಸ್ಥೆ ಕಪಾಡಲು ಪೊಲೀಸ್ ಇಲಾಖೆಯ ಜೊತೆಯಾಗಿ ಕೆಲಸ ನಿರ್ವಹಿಸಲು ಜಿಲ್ಲಾಡಳಿತ ಮುಂದಾಗುತ್ತದೆ. ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ರೈತರ ಜೊತೆ ಮಾತನಾಡಿ, ಎಲ್ಲಿ ಸಮಸ್ಯೆಯಿದೆ ಎಂದು ತಿಳಿದು ಪರಿಹಾರ ನೀಡುವುದರ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವಂತಹ ಕೆಲಸ ಮಾಡಲಾಗುತ್ತದೆ. ಹಾಗೂ ಮಹಿಳೆಯರಿಗೆ, ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸುರಕ್ಷಿತವಾದ ಆಡಳಿತ ವ್ಯವಸ್ಥೆ ನೀಡುವಲ್ಲಿ ಜಿಲ್ಲಾಡಳಿತ ಮುಂದಿರುತ್ತದೆ. ಜೊತೆಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಪ್ರತಿಯೊಂದು ಗ್ರಾಮಕ್ಕೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ಹೇಳಿದರು.

ನಿವೇಶನ ಹಾಗೂ ಮನೆ ಇಲ್ಲದ ವಸತಿ ಇಲ್ಲದವರಿಗೆ ಗುರುತಿಸಿ ಮುಂದಿನ ದಿನಗಳಲ್ಲಿ ನಿವೇಶನ ಮತ್ತು ವಸತಿಯನ್ನು ನೀಡಲಾಗುತ್ತದೆ ಹಾಗೂ ಹೊಗೆರಹಿತ ಜಿಲ್ಲೆಯನ್ನಾಗಿ ಮಾಡಲು ಪ್ರತಿ ಮನೆಗೂ ಕೇಂದ್ರ ಸರ್ಕಾರದಿಂದ ಬರುವ ರಾಜ್ಯ ಸರ್ಕಾರದಿಂದ ಬರುವ ಅಡುಗೆ ಅನಿಲ ವಿತರಿಸಲಾಗುತ್ತದೆ. ಸ್ವಚ್ಛ ಭಾರತ ಕಾರ್ಯಕ್ರಮ ಅನುಷ್ಠಾನಗೊಳಿಸುವುದು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳಿಂದ ಇಡಿದು ಗ್ರಾಮ ಮಟ್ಟದ ಅಧಿಕಾರಿಗಳವರೆಗೂ ಜೊತೆಗೂಡಿ ಕೆಲಸ ಮಾಡಲು ಜಿಲ್ಲಾಡಳಿತ ಕ್ರಮ ವಹಿಸುತ್ತದೆ ಎಂದರು.

ಅಕ್ರಮ ಗಣಿಗಾರಿಕೆ ಕಾನೂನು ವಿರುದ್ಧವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಜಿಲ್ಲಾಡಳಿತ ತಡೆಗಟ್ಟುತ್ತದೆ ಕಳ್ಳತನ ಹಾಗೂ ಇನ್ನಿತರ ಕ್ರೈಂ ಗಳನ್ನು ಪೊಲೀಸ್ ಇಲಾಖೆ ಜೊತೆ ಸೇರಿ ಕಡಿವಾಣ ಹಾಕಲು ಜಿಲ್ಲಾಡಳಿತ ಮುಂದಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

See also  ನಕಲಿ ಟಿವಿ ಚಾನೆಲ್ ಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು