News Kannada
Tuesday, October 04 2022

ಕರ್ನಾಟಕ

ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಚಿರತೆ ಸಾವು - 1 min read

Photo Credit :

ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಚಿರತೆ ಸಾವು

ಚಾಮರಾಜನಗರ: ಜಿಲ್ಲೆಯ ವನ್ಯಧಾಮಗಳಲ್ಲಿ ವನ್ಯ ಪ್ರಾಣಿಗಳು ಮೇಲಿಂದ ಮೇಲೆ ಸಾವನ್ನಪ್ಪುತ್ತಿರುವುದು ಕಂಡು ಬರುತ್ತಿದ್ದು, ಇದೀಗ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮಹದೇಶ್ವರ ಬೆಟ್ಟ ವನ್ಯಜೀವಿ ವಲಯದಲ್ಲಿ ಸುಮಾರು ಮುರ್ನಾಲ್ಕು ವರ್ಷ ಪ್ರಾಯದ ಚಿರತೆಯ ಕೊಳೆತ ಸ್ಥಿತಿಯಲ್ಲಿದ್ದ ಕಳೆಬರ ಪತ್ತೆಯಾಗಿದೆ. ಎಂದಿನಂತೆ ಅರಣ್ಯ ಸಿಬ್ಬಂದಿ ಬೆಳಗ್ಗೆ ಮಹದೇಶ್ವರ ಬೆಟ್ಟ ವನ್ಯಜೀವಿ ನೀರಳ್ಳ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದಾಗ ದುರ್ವಾಸನೆ ಬಂದಿದೆ. ಹೀಗಾಗಿ ದುರ್ವಾಸನೆ ಬಂದ ದಿಕ್ಕಿಗೆ ಹೋದ ಸಿಬ್ಬಂದಿಗೆ ಚಿರತೆಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದನ್ನು ನೋಡಿ ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಚಿರತೆಯು ಯಾವ ಕಾರಣದಿಂದ ಮೃತಪಟ್ಟಿದೆ ಎಂಬುದು ತಿಳಿದಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಮಾಹಿತಿ ತಿಳಿಯಲಿದೆ ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಏಡುಕುಂಡಲು ತಿಳಿಸಿದ್ದಾರೆ.

See also  ಬೆಂಗಳೂರಿನಲ್ಲಿ ನಾಪತ್ತೆಯಾಗಿರುವ 681 ವಿದೇಶಿಗರಿಗಾಗಿ ಪೋಲೀಸರ ಹುಡುಕಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು