News Kannada
Friday, October 07 2022

ಕರ್ನಾಟಕ

ಎನ್‍ಸಿಸಿ ಕೆಡೆಟ್‍ಗಳ ನಿಸ್ವಾರ್ಥ ಸೇವೆ : ಮಾದರಿಯಾದ ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳು - 1 min read

Photo Credit :

ಎನ್‍ಸಿಸಿ ಕೆಡೆಟ್‍ಗಳ ನಿಸ್ವಾರ್ಥ ಸೇವೆ :  ಮಾದರಿಯಾದ ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳು

ಮಡಿಕೇರಿ: ನಗರದ 19ನೇ ಕರ್ನಾಟಕ ಬೆಟಾಲಿಯನ್‍ನ ಕಮಾಂಡಿಂಗ್ ಆಫೀಸರ್ ವಿ.ಎಂ.ನಾಯಕ್ ಅವರ ಮಾರ್ಗದರ್ಶನದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್‍ನಲ್ಲಿ 50ಕ್ಕೂ ಹೆಚ್ಚು ಎನ್‍ಸಿಸಿ ಕೆಡೆಟ್‍ಗಳು ಎನ್‍ಸಿಸಿ ಅಧಿಕಾರಿ ಮೇಜರ್ ರಾಘವ ಬಿ. ಅವರ ನೇತೃತ್ವದಲ್ಲಿ ಕಳೆದ 8 ದಿನಗಳಿಂದ ಜಿಲ್ಲೆಯ ವಿವಿಧೆಡೆ ಸಂತ್ರಸ್ತರು ಆಶ್ರಯ ಪಡೆದಿರುವ ಪರಿಹಾರ ಕೇಂದ್ರಗಳಲ್ಲಿ ನಿಸ್ವಾರ್ಥ ಸೇವೆಯಲ್ಲಿ ತೊಡಗಿದ್ದಾರೆ.

ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಂತ್ರಸ್ತರಿಗೆ ಧೈರ್ಯ ತುಂಬುತ್ತಾ ನೊಂದವರಿಗೆ ಯಾವುದೇ ರೀತಿಯಲ್ಲಿ ಕೊರತೆಗಳು ಉಂಟಾಗದಂತೆ ನಿಗಾ ವಹಿಸುತ್ತಿದ್ದಾರೆ. ಆಹಾರ ಸಾಮಾಗ್ರಿಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಲುಪಿಸುವಲ್ಲಿ ಇತರ ಅಧಿಕಾರಿಗಳೊಂದಿಗೆ ಸಹಕರಿಸುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಸೇವಾ ಇಲಾಖೆಯ ಮೂಲಕ ನೀಡಲಾಗುವ ಪಡಿತರವನ್ನು ತಲುಪಿಸುವುದು, ಆಹಾರದ ಪೊಟ್ಟಣಗಳನ್ನು ಸಿದ್ಧಪಡಿಸುವುದು ಮತ್ತು ವಿತರಿಸುವುದು, ಪರಿಹಾರ ಕೇಂದ್ರಗಳ ಶುಚಿತ್ವವನ್ನು ಕಾಪಾಡುವುದು ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಫಲಾಪೇಕ್ಷೆ ಇಲ್ಲದೆ ಕೆಡೆಟ್‍ಗಳು ತಮ್ಮನ್ನು ತೊಂಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ನಿಸ್ವಾರ್ಥ ಸೇವೆಗೆ ಸಂತ್ರಸ್ತರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಮಡಿಕೇರಿ ತಾಲ್ಲೂಕಿನ ಪರಿಹಾರ ಕೇಂದ್ರಗಳಾದ ಚೆಯ್ಯಂಡಾಣೆ, ನಾಪೋಕ್ಲು, ವಾಟೆಕಾಡು, ಮರಗೋಡು, ಮೂರ್ನಾಡು, ಗುಹ್ಯ, ಕೊಂಡಂಗೇರಿ ಪ್ರದೇಶಗಳಿಗೆ ಕೆಡೆಟ್‍ಗಳ ತಂಡ ತೆರಳಿ ಮುಂದಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದರೆ ಯಾವ ರೀತಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಬಗ್ಗೆ ಕೆಡೆಟ್‍ಗಳು ಜಾಗೃತಿ ಮೂಡಿಸಿದರು.

 ಫೀ.ಮಾ.ಕಾರ್ಯಪ್ಪ ಕಾಲೇಜ್‍ನ ಎನ್‍ಸಿಸಿ ಅಧಿಕಾರಿ ಮೇಜರ್ ರಾಘವ ಮಾತನಾಡಿ, ಕಾರ್ಯಪ್ಪ ಕಾಲೇಜ್‍ನಲ್ಲಿ ಎನ್‍ಸಿಸಿ ಕೆಡೆಟ್‍ಗಳಾಗಿದ್ದ 9 ವಿದ್ಯಾರ್ಥಿಗಳು ಭಾರತೀಯ ಸೈನ್ಯಕ್ಕೆ ಭರ್ತಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಎನ್‍ಸಿಸಿ ವಿದ್ಯಾರ್ಥಿಗಳು ಸಮಾಜ ಸೇವೆಯ ಜೊತೆಗೆ ದೇಶ ಸೇವೆಯಲ್ಲೂ ತೊಡಗುವುದು ಹೆಮ್ಮೆಯ ವಿಚಾರವೆಂದರು.

 ಕಾಲೇಜು ಪ್ರಾಂಶುಪಾಲ ಡಾ.ಜಗತ್ ತಿಮ್ಮಯ್ಯ ಅವರ ಸಹಕಾರದಿಂದ ನಮ್ಮ ಸೇವೆ ಯಶಸ್ವಿಯಾಗಿದೆ ಎಂದು ವಿದ್ಯಾರ್ಥಿಗಳು ತೃಪ್ತಿ ವ್ಯಕ್ತಪಡಿಸಿದರು.

 

See also  ಅಂಗವಿಕಲರಿಂದ ಕೊಂಕಣ ರೈಲ್ವೆ ಪ್ರಾದೇಶಿಕ ಕಚೇರಿ ಎದುರು ಧರಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು