News Kannada
Thursday, September 29 2022

ಕರ್ನಾಟಕ

ಬಡವರ ಏಳಿಗೆಗೆ ಅರಸು ಅವರು ನೀಡಿದ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಶ್ಲಾಘನೆ - 1 min read

Photo Credit :

ಬಡವರ ಏಳಿಗೆಗೆ ಅರಸು ಅವರು ನೀಡಿದ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಶ್ಲಾಘನೆ

ಮಡಿಕೇರಿ: ಬಡವರು, ನಿರ್ಗತಿಕರು, ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಡಿ.ದೇವರಾಜ ಅರಸು ಭವನದಲ್ಲಿ ಮಂಗಳವಾರ ನಡೆದ ದಿ.ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಿ.ದೇವರಾಜ ಅರಸು ಅವರ ಪ್ರಾಮುಖ್ಯತೆಯನ್ನು ಇಂದಿನ ಯುವಜನರು ತಿಳಿದುಕೊಳ್ಳಬೇಕು. ಇಂದು ನಾವು ಏನು ಮಾಡಿದ್ದೇವೆ ಎಂಬುದು ನಾಳಿನ ಜನರಿಗೆ ಗೊತ್ತಾಗಬೇಕು. ಆ ನಿಟ್ಟಿನಲ್ಲಿ ಕಾರ್ಯಗಳನ್ನು ಮಾಡಬೇಕು. ಅಂತಹ ಸಾಲಿಗೆ ಡಿ.ದೇವರಾಜ ಅರಸು ಅವರು ಸಲ್ಲುತ್ತಾರೆ ಎಂದು ಅವರು ತಿಳಿಸಿದರು.    

ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಅವರು ಮಾತನಾಡಿ ಡಿ.ದೇವರಾಜ ಅರಸು ಅವರು ಅಸಾಮಾನ್ಯ ಶಕ್ತಿ ಎಂದು ಅವರು ಬಣ್ಣಿಸಿದರು.

ಹಲವು ಏರಿಳಿತಗಳನ್ನು ಕಂಡ ಅಪರೂಪದ ರಾಜಕಾರಣಿ. ಅಖಂಡ ಕರ್ನಾಟಕ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದರು. ಡಿ.ದೇವರಾಜ ಅರಸು ಅವರ ಕರ್ತವ್ಯ ನಿಷ್ಠೆ ಅದ್ಭುತವಾದದ್ದು ಎಂದರು.

ಸಾಮಾಜಿಕ ತಾರತಮ್ಯ ನಿವಾರಣೆಗೆ ಪ್ರಯತ್ನಿಸಿದರು. ಹಿಂದುಳಿದವರ ಪರವಾಗಿ ಮೊಟ್ಟ ಮೊದಲಾಗಿ ಧ್ವನಿ ಎತ್ತಿದವರು  ಡಿ.ದೇವರಾಜ ಅರಸು ಅವರು ಎಂದರು.

ದೇಶದ ಇತಿಹಾಸದಲ್ಲಿಯೇ ಭೂ ಸುಧಾರಣೆಯನ್ನು ಜಾರಿಗೊಳಿಸಿದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್,  ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಇತರರು ಇದ್ದರು.

ಬಿಸಿಎಂ ಇಲಾಖಾ ಅಧಿಕಾರಿ ಶಿವಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಹರ್ಷಿತ ತಂಡ ನಾಡಗೀತೆ ಹಾಡಿದರು. ಭಾರತಿ ಅವರು ನಿರೂಪಿಸಿ ಸದ್ಭಾವನಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ಬೋಧಿಸಿದರು.

See also  ಇಂಧನ ಬೆಲೆ ಏರಿಕೆ ಖಂಡಿಸಿ ಕಾಸರಗೋಡಿನಲ್ಲಿ ಯಶಸ್ವಿ ಮುಷ್ಕರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು