News Kannada
Sunday, December 04 2022

ಕರ್ನಾಟಕ

ಡಿಕೆಶಿ ಬಂಧನ ವಿರೋಧಿಸಿ ರಾಮನಗರದಾದ್ಯಂತ ಪ್ರತಿಭಟನೆ

Photo Credit :

ಡಿಕೆಶಿ ಬಂಧನ ವಿರೋಧಿಸಿ ರಾಮನಗರದಾದ್ಯಂತ ಪ್ರತಿಭಟನೆ

ರಾಮನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಯಲ್ಲಿ ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿಯಿಂದಲೇ ಅವರ ಕಾರ್ಯಕ್ಷೇತ್ರವಾದ ರಾಮನಗರ, ಕನಕಪುರ, ಚನ್ನಪಟ್ಟಣ ಮೊದಲಾದ ಕಡೆಗಳಲ್ಲಿ ಪ್ರತಿಭಟನೆ ಆರಂಭಿಸಲಾಗಿದ್ದು, ಬುಧವಾರವು ಮುಂದುವರಿದಿದೆ.

ಬೆಳಗ್ಗೆಯಿಂದಲೇ ಜಮಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಅಭಿಮಾನಿಗಳು ಪ್ರತಿಭಟನೆ, ರಸ್ತೆ ತಡೆ, ಅಣಕು ಶವ ಪ್ರದರ್ಶನ ಸೇರಿದಂತೆ ಹಲವು ರೀತಿಯಲ್ಲಿ ಪ್ರತಿಭಟನೆ ನಡೆಸಿತ್ತಿದ್ದಾರೆ. ಕೆಲವೆಡೆ ಅಂಗಡಿ ಮುಂಗಟ್ಟು ಮುಚ್ಚಲಾಗಿದ್ದರೆ, ಜೆಡಿಎಸ್ ಕಾರ್ಯಕರ್ತರು ಕೂಡ ಪ್ರತಿಭಟನೆಗೆ ಕೈಜೋಡಿಸಿದ್ದಾರೆ.

ನಿನ್ನೆ ರಾತ್ರಿಯೇ ರಾಮನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕುಳಿತು ರಸ್ತೆ ತಡೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರಗಳನ್ನು ಹಿಡಿದು ಅಯ್ಯಯ್ಯೋ ಅನ್ಯಾಯ.. ಬೇಕೆ ಬೇಕು ನ್ಯಾಯ ಬೇಕು ಎಂದು ಘೋಷಣೆಗಳನ್ನು ಕೂಗಿ ಟೈರ್‍ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಡಿಕೆಶಿ ಅಭಿಮಾನಿಗಳು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ನಾಯಕನ ಬಂಧನವನ್ನು ಖಂಡಿಸಿ ರಸ್ತೆಯಲ್ಲಿ ಕೆಲವರು ಕಣ್ಣೀರಿಟ್ಟು ಒದ್ದಾಡಿದ್ದಾರೆ. ಇನ್ನು ದಿಢೀರ್ ಆಗಿ ಮಂಗಳವಾರ ರಾತ್ರಿ ರಸ್ತೆ ತಡೆ ಪ್ರತಿಭಟನೆ ನಡೆಸಿದ್ದರಿಂದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ವಾಹನಗಳನ್ನು ತಡೆಯೊಡ್ಡಿದ ಕಾರಣದಿಂದ ರಾತ್ರಿಯಲ್ಲಿ ಪ್ರಯಾಣಿಕರು ಪರಿತಪಿಸುವಂತಾಯಿತು.

ಬುಧವಾರ ಬೆಳಗ್ಗಿನಿಂದಲೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಮುಖ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಧರಣಿ ಕುಳಿತು ಹೆದ್ದಾರಿಯನ್ನು ಸಂಪೂರ್ಣ ಬಂದ್ ಗೊಳಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದೀಗ ಪ್ರತಿಭಟನೆಗಳು ಮುಂದುವರೆದಿದ್ದು, ಮೈಸೂರು, ಮಂಡ್ಯ, ಕೊಡಗು ಸೇರಿದಂತೆ ಹಲವೆಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

See also  ನಿರಾಶ್ರಿತರಿಗಾಗಿ ಮೀಸಲಿಟ್ಟಿರುವ ಜಾಗ ಪರಿಶೀಲಿಸಿದ ಶಾಸಕ ಅಪ್ಪಚ್ಚು ರಂಜನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು