News Kannada
Friday, December 02 2022

ಕರ್ನಾಟಕ

ಕೆ.ಆರ್.ಎಸ್‍ನಿಂದ ನೀರು ಬಿಡುಗಡೆ: ದೋಣಿವಿಹಾರ ಸ್ಥಗಿತ

Photo Credit :

ಕೆ.ಆರ್.ಎಸ್‍ನಿಂದ ನೀರು ಬಿಡುಗಡೆ: ದೋಣಿವಿಹಾರ ಸ್ಥಗಿತ

ಮಂಡ್ಯ: ಕಾವೇರಿ ಕಣಿವೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಹರಿದು ಬರುತ್ತಿರುವ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು ಇದೀಗ ಸುಮಾರು 20 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ಕಳೆದ ಆಗಸ್ಟ್ ಮೊದಲ ವಾರದಲ್ಲಿ ಅಣೆಕಟ್ಟೆ ಭರ್ತಿಯಾಗಿದ್ದು, ನದಿ ಮೂಲಕ 2 ಲಕ್ಷ ಕ್ಯೂಸೆಕ್ಸ್ ವರೆಗೆ ನೀರನ್ನು ಹೊರಬಿಡಲಾಗಿತ್ತು. ಇದರಿಂದ ಶ್ರೀರಂಗಪಟ್ಟಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಎದುರಾಗಿತ್ತು. ಆ.29ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದರು.

ದೋಣಿ ವಿಹಾರ ಸ್ಥಗಿತ: ಕೆಆರ್‍ಎಸ್ ಜಲಾಶಯದಿಂದ ಕಾವೇರಿ ನದಿಗೆ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಟ್ಟ ಹಿನ್ನೆಲೆಯಲ್ಲಿ ಪ್ರಸಿದ್ದ ರಂಗನತಿಟ್ಟು ಪಕ್ಷಿಧಾಮ ಪ್ರವಾಸಿ ತಾಣದ ದೋಣಿವಿಹಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮತ್ತೆ ಮಳೆ ಪ್ರಭಾವ ಹೆಚ್ಚಾಗಿ ಕಾವೇರಿ ನದಿಗೆ ಹೆಚ್ಚಿನ ಒಳಹರಿವು ಬರುತ್ತಿರುವ ಹಿನ್ನೆಲೆ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ರಂಗನತಿಟ್ಟು ಪಕ್ಷಿಧಾಮ ನೋಡಲು ಬಂದ ಪ್ರವಾಸಿಗರಿಗೆ ದೋಣಿವಿಹಾರ ಸ್ಥಗಿತಗೊಂಡಿದ್ದರೂ ಪ್ರವೇಶ ಪಡೆದು ವೀಕ್ಷಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ನೀರಾವರಿ ಇಲಾಖೆಯ ಸೂಚನೆ ಮೇರೆಗೆ ಕಳೆದ ವಾರದಿಂದ ಪ್ರಾರಂಭವಾಗಿದ್ದ ದೋಣಿವಿಹಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಉಪವಲಯಾರಣ್ಯಾಧಿಕಾರಿ ಪುಟ್ಟಮಾದೇಗೌಡ ತಿಳಿಸಿದರು.

ಪ್ರಸ್ತುತ ಜಲಾಶಯದಲ್ಲಿ ಗರಿಷ್ಟ ಮಟ್ಟ 124.80 ಅಡಿಗಳಷ್ಟು ನೀರನ್ನು ಸಂಗ್ರಹಿಸಲಾಗಿದ್ದು, ಜಲಾಶಯಕ್ಕೆ 16,840 ಕ್ಯೂಸೆಕ್ಸ್ ಹರಿದು ಬರುತ್ತಿದೆ. 17,809 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ. 49.452 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಜಲಾಶಯಕ್ಕೆ ಹೆಚ್ಚಿನ ಒಳ ಹರಿವು ಹೆಚ್ಚಾಗುವ ಸಾಧ್ಯತೆ ಇದ್ದು, ಮದ್ಯರಾತ್ರಿ ಇನಷ್ಟು ನೀರನ್ನು ಹೊರಬಿಡಲಾಗುವುದು ನದಿ ಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

See also  ಬೆಳಗಾವಿ ಎಸ್ ಪಿಗೆ ಕೋವಿಡ್ 19 ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು