News Kannada
Thursday, December 08 2022

ಕರ್ನಾಟಕ

ಶಿಕ್ಷಕರಿಗೆ ಸಕಾಲದಲ್ಲಿ ಭಡ್ತಿ ನೀಡಬೇಕು: ಶಾಸಕ ಬೋಪಯ್ಯ ಅಭಿಪ್ರಾಯ

Photo Credit :

ಶಿಕ್ಷಕರಿಗೆ ಸಕಾಲದಲ್ಲಿ ಭಡ್ತಿ ನೀಡಬೇಕು: ಶಾಸಕ ಬೋಪಯ್ಯ ಅಭಿಪ್ರಾಯ

ಮಡಿಕೇರಿ: ಶಿಕ್ಷಕರಾಗಿ ಸೇವೆಗೆ ಸೇರಿದವರು ಶಿಕ್ಷಕರಾಗಿಯೇ ನಿವೃತ್ತಿ ಹೊಂದುತ್ತಿದ್ದು, ಈ ವ್ಯವಸ್ಥೆ ಬದಲಾಗಬೇಕು ಮತ್ತು ಶಿಕ್ಷಕರಿಗೆ ಭಡ್ತಿ ದೊರೆಯುವಂತಾಗಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಹಯೋಗದಲ್ಲಿ ನಗರದ ಸಂತ ಜೋಸೆಫರ ಶಾಲೆಯಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪದವಿ, ಸ್ನಾತಕೋತ್ತರ ಪದವಿ ಪಡೆದವರು ಸೇರಿದಂತೆ ಎಲ್ಲರಿಗೂ ಭಡ್ತಿ ಸಿಗಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯ. ಪ್ರಾಥಮಿಕ ಶಿಕ್ಷಕರು ಪ್ರತಿಯೊಬ್ಬರಿಗೂ ಸಹ ಸದಾ ನೆನಪಿನಲ್ಲಿ ಇರುತ್ತಾರೆ. ಗುರುಗಳಿಗೆ ಸಮಾಜದಲ್ಲಿ ತನ್ನದೇ ಆದ ಗೌರವ ಸ್ಥಾನವಿದೆ ಎಂದು ಬೋಪಯ್ಯ ಹೇಳಿದರು.

ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸಾಕಷ್ಟು ತೊಂದರೆ ಅನುಭವಿಸುವಂತಾಯಿತು. ಸದ್ಯ ಮಳೆ ಕಡಿಮೆಯಾಯಿತಲ್ಲ ಎಂದು ನೆಮ್ಮದಿಯ ನಿಟ್ಟುಸಿರು ಬಿಡುವ ಸಂದರ್ಭದಲ್ಲಿ ಮತ್ತೆ ಮಳೆ ಆರಂಭವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಬಲಿಷ್ಠ ಹಾಗೂ ಸುಶಿಕ್ಷಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.

ಆರ್.ಆರ್. ಆಸ್ಪತ್ರೆಯ ಮಕ್ಕಳ ತಜ್ಞ ಬಿ.ಸಿ.ನವೀನ್ ಕುಮಾರ್ ಅವರು ಮಾತನಾಡಿ, ತಂದೆ-ತಾಯಂದಿರು ಮಕ್ಕಳಿಗೆ ಜೀವ ನೀಡಿದರೆ, ಶಿಕ್ಷಕರು ಜೀವನ ನೀಡುತ್ತಾರೆ. ಆದ್ದರಿಂದ ಶಿಕ್ಷಕರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಅವರು ಹೇಳಿದರು.

ದೇಶದಲ್ಲಿನ 2 ಕೋಟಿ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದು, ಎಲ್ಲಾ ಮಕ್ಕಳಿಗೂ ಪೌಷ್ಠಿಕ ಆಹಾರ ದೊರೆಯಬೇಕು ಎಂದ ಅವರು, ವಿದ್ಯಾಭ್ಯಾಸವು ಸತ್ಯಾನ್ವೇಷಣೆ ಮಾಡುವಂತದ್ದು. ಆದ್ದರಿಂದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯಬೇಕು. ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಶಿಕ್ಷಣವು ವೃತ್ತಿ ನೈಪುಣ್ಯ ಜೊತೆಗೆ ಸಾಮಾಜಿಕ ಪ್ರಜ್ಞೆ ಬೆಳೆಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

See also  ಕೊರೋನಾ: ರಾಮನಗರದ ಕುಂಬಾರ ಬೀದಿ ಸೀಲ್ ಡೌನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು