News Kannada
Friday, December 02 2022

ಕರ್ನಾಟಕ

ಜಲಾಶಯ ಭರ್ತಿಯಾಗಿರುವುದರಿಂದ ರೈತರಿಗೆ ನೆಮ್ಮದಿ: ಸಿಎಂ ಯಡಿಯೂರಪ್ಪ 

Photo Credit :

ಜಲಾಶಯ ಭರ್ತಿಯಾಗಿರುವುದರಿಂದ ರೈತರಿಗೆ ನೆಮ್ಮದಿ: ಸಿಎಂ ಯಡಿಯೂರಪ್ಪ 

ಎಚ್.ಡಿ.ಕೋಟೆ: ರಾಜ್ಯದಲ್ಲಿ ಉತ್ತಮ ಮಳೆಯಾಗಿ ಕಾವೇರಿ ಹಾಗೂ ಕಬಿನಿ ಜಲಾಶಯ ಭರ್ತಿಯಾಗಿದ್ದು, ತಮಿಳುನಾಡಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ಇದರಿಂದ ರೈತರಿಗೆ ನೆಮ್ಮದಿ ಸಿಕ್ಕಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದರು. 

ಶನಿವಾರ ಹೆಚ್.ಡಿ ಕೋಟೆಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಅವರು ಮಾತನಾಡಿ, ರಾಜ್ಯದಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ತಮಿಳುನಾಡಿಗೆ ಹೋಗುತ್ತಿರುವುದರಿಂದ ಅಲ್ಲಿನ ಜಲಾಶಯಗಳು ಭರ್ತಿಯಾಗಿದೆ. ಮೇಕೆದಾಟು ಯೋಜನೆ ಬಗ್ಗೆ ಪರಿಶೀಲಿಸಿ ಕ್ರಮವಹಿಸಲಾಗುವುದು. ಅತಿವೃಷ್ಠಿಯಿಂದ ಅಪಾರ ಹಾನಿಯಾಗಿದ್ದು, ಶುಕ್ರವಾರ ಪ್ರಧಾನ ಮಂತ್ರಿಗಳ ಜೊತೆ ಪರಿಸ್ಥಿತಿಯನ್ನು ಹೇಳಲಾಗಿದೆ.

ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರು ಖುದ್ದು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರವಾಹದಿಂದ ಸುಮಾರು 1.25 ಲಕ್ಷ ರೂ. ಮನೆಗಳು ನಾಶವಾಗಿದ್ದು, ಅವುಗಳ ಪುನರ್ ನಿರ್ಮಾಣ ಮಾಡಬೇಕಾಗಿದೆ. 

ಜಲಾಶಯದಿಂದ ಹೆಚ್ಚ್ಚುವರಿ ನೀರನ್ನು ನದಿಗೆ ಹರಿಸಿದಾಗ ಜಲಾಶಯದ ಮುಂಭಾಗದ ಸೇತುವೆ ಮುಳುಗಡೆಯಾಗಿ 30ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿತವಾಗುವುದರಿಂದ ಈ ಭಾಗದಲ್ಲಿ ಬಹಳ ವರ್ಷಗಳಿಂದ ಸಮಸ್ಯೆಯಿದ್ದು, ಬಗೆಹರಿಸುವ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ತೀರ್ಮಾನಿಸಿ 20 ಕೋಟಿ ರೂ ವೆಚ್ಚದಲ್ಲಿ ಹೊಸದಾಗಿ ಸೇತುವೆ ನಿರ್ಮಾಣಕ್ಕೆ ಮುಂದಾಗುವುದಾಗಿ ತಿಳಿಸಿದರಲ್ಲದೆ, ಕಬಿನಿ ಜಲಾಶಯದ ಮುಂಭಾಗ ವಿಶಾಲವಾದ ಸ್ಥಳವಿದ್ದು, ಇಲ್ಲಿ ಕೆ ಆರ್ ಎಸ್ ಮಾದರಿಯ ಬೃಂದಾವನ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಿನ ಶಾಸಕ ಅನೀಲ್ ಕುಮಾರ್ ವಹಿಸಿದ್ದರು. ಉಸ್ತುವಾರಿ ಸಚಿವ ಸೋಮಣ್ಣ, ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಗೃಹ ಸಚಿವ ಬಸವರಾಜು ಬೊಮ್ಮಾಯಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪರಿಮಳ ಶ್ಯಾಂ ಸುಂದರ್, ಉಪಾಧ್ಯಕ್ಷರು ರತ್ನಮ್ಮ,  ಶಾಸಕರಾದ ಹರ್ಷವರ್ಧನ್, ನಿರಂಜನ್ ಕುಮಾರ್, ಮಾಜಿ ಸಚಿವ ಎಂ.ಶಿವಣ್ಣ, ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ, ಬಸವರಾಜು, ಜಲ ಸಂಪನ್ಮೂಲ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್,   ಕಾವೇರಿ ನಿಗಮ ಎಂಡಿ ಜಯಪ್ರಕಾಶ್, ಎಸ್.ಇ.ಶಂಕರೇಗೌಡ, ಇ.ಇ.ಸುಜಾತ, ಐಜಿಪಿ ವಿಫುಲ್ ಕುಮಾರ್,    ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ತಹಸೀಲ್ದಾರ್ ಆರ್.ಮಂಜುನಾಥ್, ಇಓ ರಾಮಲಿಂಗಯ್ಯ ಡಿವೈಎಸ್ ಪಿ ಸುಂದರ್ ರಾಜ್ , ಪೂವಯ್ಯ, ಪುಟ್ಟಸ್ವಾಮಿ, ಮುಖಂಡರಾದ ಮಂಜುಳ ದೇವಣ್ಣ, ಜ್ಯೋತಿಯೋಗೇಶ್, ಸಿದ್ದರಾಜು, ವೆಂಕಟಸ್ವಾಮಿ, ಸಿ.ಕೆ.ಗಿರೀಶ್, ಮನುಗನಹಳ್ಳಿ ಮಾದಪ್ಪ, ಏಜಾಜ್ ಪಾಷ, ಶಂಬೇಗೌಡ, ಜಿ.ವಿ.ಸೀತಾರಾಮ್, ಮೊತ್ತಬಸವರಾಜು, ರಾಜು ವಿಶ್ವಕರ್ಮ, ಅರಸು, ನಂದೀಶ್, ಸೋಮೇಶ್, ಪ್ರದೀಪ್ ಉಪಸ್ಥಿತರಿದ್ದರು.

See also  ಎಲ್ಲಾ 15 ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ: ಈಶ್ವರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು