News Kannada
Wednesday, November 30 2022

ಕರ್ನಾಟಕ

ಗ್ರಾಮೀಣ ದಸರಾ ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ - 1 min read

Photo Credit :

ಗ್ರಾಮೀಣ ದಸರಾ ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ

ಮೈಸೂರು: ಈ ಬಾರಿ ಗ್ರಾಮೀಣ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಗ್ರಾಮೀಣ ಜನರಿಗೆ ನಾಡಹಬ್ಬದ ಮಹತ್ವದ ಬಗ್ಗೆ ಉತ್ತಮ ಸಂದೇಶ ರವಾನಿಸಿ ಎಂದು ವಸತಿ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಕಿವಿಮಾತು ಹೇಳಿದರು.

ಗ್ರಾಮೀಣ ದಸರಾ ಆಯೋಜಿಸುವ ಸಂಬಂಧ ಪಿರಿಯಾಪಟ್ಟಣದ ತಾಲ್ಲೂಕು ಆಡಳಿತ ಭವನದ ಸಭಾಂಗಣದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಈ ಬಾರಿಯ ದಸರಾ ಮಹೋತ್ಸವದಲ್ಲಿ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ಆದಿವಾಸಿ ಜನರು ಪಾಲ್ಗೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಜನರನ್ನು ಮೈಸೂರಿಗೆ ಕರೆತರಲು ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳು ಬೇಕು ಎಂಬ ಮನವಿಯನ್ನು ಸ್ಥಳೀಯ ಶಾಸಕರು ಸಲ್ಲಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಬಸ್ಸುಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು ಎಂದರು.

ದಸರಾ ನೋಡಲು ಬರುವ ಜನರಿಗೆ ವಿಧಿಸುವ ವೆಚ್ಚವನ್ನು ಭರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಆ ಎಲ್ಲ ಜನರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ತಾಲ್ಲೂಕು ಆಡಳಿತದ ವತಿಯಿಂದ ಏರ್ಪಾಡು ಮಾಡುವಂತೆ ನಿರ್ದೇಶನ ನೀಡಿದರು.

ಪಾರಂಪರಿಕ ಹಬ್ಬವಾದ ದಸರಾ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲು ಅಧಿಕಾರಿಗಳು ಶ್ರಮಿಸಬೇಕು. ಕಲೆಗಳ ನೆಲೆಬೀಡಾಗಿರುವ ಗ್ರಾಮಾಂತರ ಪ್ರದೇಶದಲ್ಲಿ ಆಡಗಿರುವ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಗ್ರಾಮೀಣ ದಸರಾ ಕಾರ್ಯಕ್ರಮವು ಸೂಕ್ತ ವೇದಿಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಕೆ. ಮಹದೇವ್, ಗಣ್ಯರಾದ ಕೋಟೆ ಎಂ. ಶಿವಣ್ಣ, ಎಚ್.ಜಿ. ಬಸವರಾಜು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಂಜುನಾಥ್, ರಾಜೇಂದ್ರ, ರುದ್ರಮ್ಮ ನಾಗಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಿರುಪಮಾ ರಾಜೇಶ್, ಉಪವಿಭಾಗಾಧಿಕಾರಿ ವೀಣಾ, ತಹಸೀಲ್ದಾರ್ ಎನ್. ಶ್ವೇತಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೃತಿ ಉಪಸ್ಠಿತರಿದ್ದರು.

ದಸರಾ ಕನ್ನಡ ಪುಸ್ತಕ ಮಾರಾಟ ಮೇಳ:  ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019 ವನ್ನು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 7 ರವರೆಗೆ ಕಾಡಾ ಮೈದಾನದಲ್ಲಿ ಏರ್ಪಡಿಸಲಾಗಿದ್ದು,

ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.2 ಸಾವಿರ ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು,

ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22484516, 22107704ನ್ನು ಸಂಪರ್ಕಿಸಬಹುದಾಗಿದೆ.

See also  ಪ್ರತಿಯೊಬ್ಬರೂ ಆರೋಗ್ಯದತ್ತ ಕಾಳಜಿ ವಹಿಸುವುದು ಅಗತ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು