News Kannada
Tuesday, December 06 2022

ಕರ್ನಾಟಕ

ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು: ಕೆಳ ಭಾಗದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚನೆ

Photo Credit :

ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು: ಕೆಳ ಭಾಗದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚನೆ

ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ವರದಿ ಪಡೆಯಲಾಗಿದೆ.

ಈ ಬಗ್ಗೆ ಸೆ. 9 ರಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಾಧಿಕಾರಿ, ತಹಶೀಲ್ದಾರ್, ಮಡಿಕೇರಿ ತಾಲ್ಲೂಕು ಇವರು ಇತರೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಸ್ತೆಯಿಂದ 200 ಮೀಟರ್ ಎತ್ತರದಲ್ಲಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಳಭಾಗದಲ್ಲಿರುವ ಅಂಗಡಿಗಳ ಮಾಲೀಕರಿಗೆ ತಾತ್ಕಾಲಿಕವಾಗಿ ಅಂಗಡಿ ಖಾಲಿಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಳಭಾಗದಲ್ಲಿರುವ ಮನೆಗಳ ಮಾಲೀಕರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳನ್ನು ಖಾಲಿ ಮಾಡಲು ಗ್ರಾಮ ಪಂಚಾಯತಿ ವತಿಯಿಂದ ನೋಟೀಸು ನೀಡಲಾಗಿದೆ. ಸದರಿ ಪ್ರದೇಶದ ಇನ್ನೊಂದು ಭಾಗದಲ್ಲಿ ಜಾರಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಭೂ ಸರ್ವೇಕ್ಷಣಾ ಇಲಾಖೆಯ ಸಲಹೆಯಂತೆ ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹೊದಿಸಿ ಮಣ್ಣು ಮುಚ್ಚಲು ಕ್ರಮ ವಹಿಸಲಾಗಿದೆ.

 

 

See also  ಬಳ್ಳಾರಿ: ಕೋವಿಡ್-19ನಿಂದ ಮತ್ತಿಬ್ಬರು ಗುಣಮುಖ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು