News Kannada
Friday, December 02 2022

ಕರ್ನಾಟಕ

ಅಪ್ರಾಪ್ತೆ ಮೇಲೆ ಬಲಾತ್ಕಾರ ಪ್ರಕರಣ: ಆರೋಪಿಗೆ 7 ವರ್ಷ ಜೈಲು

Photo Credit :

ಅಪ್ರಾಪ್ತೆ ಮೇಲೆ ಬಲಾತ್ಕಾರ ಪ್ರಕರಣ: ಆರೋಪಿಗೆ 7 ವರ್ಷ ಜೈಲು

ಕಾರವಾರ: ಅಪ್ರಾಪ್ತಗೆ ಬಲಾತ್ಕಾರ ಮಾಡಿದ ಆರೋಪ ಸಾಬೀತಾಗಿದ್ದು ಕಾರವಾರದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆರೋಪಿಗೆ 7 ವರ್ಷ ಜೈಲು ಹಾಗೂ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮದ ಸಾಕ್ರು ಟಕ್ಕು ಹುಂಬೆ ಎನ್ನುವಾತ ಯಲ್ಲಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯ ಹೊಸಳ್ಳಿ ಗ್ರಾಮದ 17 ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆಯಿಸಿಕೊಂಡು ಬಲಾತ್ಕಾರ ಮಾಡಿ ಗರ್ಭಿಣಿ ಮಾಡಿದ್ದ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಯಲ್ಲಾಪುರ ಪಿ.ಎಸ್.ಐ.ಗಳಾದ ವಿಜಯ ಬಿರಾದಾರ ಹಾಗೂ ಶ್ರೀಧರ ಎಸ್.ಆರ್. ತನಿಖೆ ನಡೆಸಿ ಐ.ಪಿ.ಸಿ. ಕಲಂ 376 (2) (ಎನ್), ಮತ್ತು ಕಲಂ-5(ಐ) ಮತ್ತು 6 ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರುಪಡಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಆರೋಪಿತನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಐ.ಪಿ.ಸಿ. ಕಲಂ 376 (2) (ಎನ್) ರ ಅಡಿಯಲ್ಲಿ 7 ವರ್ಷ ಜೈಲುಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿದ್ದು, ತಪ್ಪಿದ್ದಲ್ಲಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅದರಂತೆ ಪೋಕ್ಸೋ ಕಾಯಿದೆ ಕಲಂ: ಕಲಂ-5(ಐ) ಮತ್ತು 6 ಅಡಿಯಲ್ಲಿ 7 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿದ್ದು ತಪ್ಪಿದಲ್ಲಿ 6 ತಿಂಗಳ ಜೈಲು ಶಿಕ್ಷಿ ವಿಧಿಸಿದೆ.

ಪ್ರಕಟವಾದ ಎರಡೂ ಶಿಕ್ಷೆಗಳು ಒಟ್ಟಿಗೆ ಜಾರಿಗೆ ಬರುವಂತೆ ಆದೇಶಿಸಿದ್ದಲ್ಲದೇ, ನೊಂದ ಬಾಲಕಿಗೆ ದಂಡದ ಮೊತ್ತದಲ್ಲಿ ರೂ. 50,000 ವನ್ನು ಪರಿಹಾರ ನೀಡಬೇಕೆಂದು ಜಿಲ್ಲಾ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸುಭಾಶ ಪಿ. ಕೈರನ್ನ ವಾದ ಮಂಡಿಸಿದ್ದರು.

See also  ಬೆಳ್ತಂಗಡಿ: ನೀರುಪಾಲಾದ ಸೇತುವೆಗೆ ಸ್ಟೀಲ್ ಬ್ರಿಡ್ಜ್ ರೂಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು