News Kannada
Friday, December 02 2022

ಕರ್ನಾಟಕ

ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಮೃತ್ಯು

Photo Credit :

ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಮೃತ್ಯು

ಕಾಸರಗೋಡು: ಸ್ಕೂಟರ್ ಡಿಕ್ಕಿ ಹೊಡೆದು ಬೈಕಿನಿಂದ ರಸ್ತೆಗೆ ಬಿದ್ದ ಸವಾರನ ಮೇಲೆ ಮೀನು ಲಾರಿ ಹರಿದು ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಹೊಸಂಗಡಿ ಬಳಿ ನಡೆದಿದೆ.

ಮೃತನನ್ನು ಕುಬಣೂರು ಅರ್ಜಾಲ್ ನ ಕೆ. ನವಾಫ್(22) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಯಾಗಿದ್ದ ನವಾಫ್ ಬೆಳಗ್ಗೆ ಕಾಲೇಜಿಗೆ ತೆರಳುತ್ತಿದ್ದಾಗ ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ನವಾಫ್ ರಸ್ತೆಗೆಸೆಯಲ್ಪಟ್ಟಿದ್ದು, ಈ ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಕಾಸರಗೋಡಿನತ್ತ ಬರುತ್ತಿದ್ದ ಲಾರಿ ನವಾಫ್ ನ ದೇಹದ ಮೇಲೆ ಹರಿದು ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡ ನವಾಫ್ ನನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟನು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಕೇರಳದ ಸಹಕಾರಿ ವಲಯ ಪತನಗೊಳಿಸಲು ನೋಟು ಅಮಾನ್ಯೀಕರಣಗೊಳಿಸಲಾಗಿತ್ತು: ಪಿ. ವಿಜಯನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು