News Kannada
Sunday, December 04 2022

ಕರ್ನಾಟಕ

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ಇಲ್ಲ : ಕೆ.ಕೆ.ಮಂಜುನಾಥ್ ಕುಮಾರ್ ಸ್ಪಷ್ಟನೆ

Photo Credit :

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ಇಲ್ಲ : ಕೆ.ಕೆ.ಮಂಜುನಾಥ್ ಕುಮಾರ್ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಊಹಾಪೋಹವನ್ನು ಸೃಷ್ಟಿಸುವ ಮೂಲಕ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಗೊಂದಲ ಮೂಡಿಸುವ ಪ್ರಯತ್ನದಲ್ಲಿ ಕೆಲವರು ತೊಡಗಿದ್ದು, ಯಾರೂ ಗಾಳಿಸುದ್ದಿಗೆ ಕಿವಿಗೊಡಬಾರದೆಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಕೆಪಿಸಿಸಿ ಮತ್ತು ಹೈಕಮಾಂಡ್ ಹಂತದಲ್ಲಿ ಯಾವುದೇ ರೀತಿಯ ಚಿಂತನೆಗಳಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳಿಸಲು ನನ್ನ ಮೇಲೆ ವಿಶ್ವಾಸವಿಟ್ಟು ಏಳು ತಿಂಗಳ ಹಿಂದೆಯಷ್ಟೇ ಕೆಪಿಸಿಸಿ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡಿದೆ. ಪಕ್ಷದ ಮುಖಂಡರ ನಿರೀಕ್ಷೆಯಂತೆ ಕಾರ್ಯನಿರ್ವಹಿಸುತ್ತಿದ್ದು, ಕಾರ್ಯಕರ್ತರಿಗೆ ಮೊದಲ ಆದ್ಯತೆ ನೀಡಲಾಗಿದೆ. ವಿವಿಧ ಘಟಕಗಳನ್ನು ಉತ್ತೇಜಿಸುವ ಸಲುವಾಗಿ ಅನೇಕ ಸಭೆಗಳನ್ನು ನಡೆಸಿ ಪಕ್ಷ ಸಂಘಟನೆಗಾಗಿ ಪ್ರೋತ್ಸಾಹಿಸಲಾಗಿದೆ.

 ಬಿಜೆಪಿಯ ಜನವಿರೋಧಿ ನೀತಿಗಳ ವಿರುದ್ಧ ಯಶಸ್ವಿಯಾಗಿ ಹೋರಾಟ ನಡೆಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಎನ್ನುವುದನ್ನು ಸಾಬೀತುಪಡಿಸಲಾಗಿದೆ. ಲೋಕಸಭಾ ಚುನಾವಣೆಗೆ ಎರಡು ತಿಂಗಳು ಇರುವಾಗಷ್ಟೇ ನನಗೆ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು. ಆದರೂ ಅಲ್ಪಾವಧಿಯಲ್ಲೇ ಕಾರ್ಯಕರ್ತರ ಸಹಕಾರದೊಂದಿಗೆ ಬಿಜೆಪಿಯ ಗೆಲುವಿನ ಅಂತರವನ್ನು ಕಡಿಮೆ ಮಾಡಲಾಗಿದೆ ಎಂದು ಮಂಜುನಾಥ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.

 ಜಾತ್ಯಾತೀತ ವ್ಯಕ್ತಿತ್ವದ ನನ್ನ ಕಾರ್ಯಕ್ಷಮತೆಯ ಬಗ್ಗೆ ಕಾರ್ಯಕರ್ತರು ಹಾಗೂ ಮತದಾರರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಆದರೆ ಅಲ್ಪ ಕಾಲದಲ್ಲೇ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮೊತ್ತದ ಮತಗಳನ್ನು ಗಳಿಸಿಕೊಡುವಲ್ಲಿ ಶಕ್ತನಾದ ನನ್ನನ್ನು ಹಣಿಯುವುದಕ್ಕಾಗಿ ಕೆಲವು ಪಕ್ಷ ವಿರೋಧಿಗಳು ಹವಣಿಸುತ್ತಿದ್ದಾರೆ. ಪ್ರತಿ ಬಾರಿ ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಂಡು ಬಿಜೆಪಿಗೆ ಲಾಭ ಮಾಡಿಕೊಡುವ ಬೆರಳೆಣಿಕೆಯಷ್ಟು ಮಂದಿಯಿಂದ ಈ ಗೊಂದಲ ಸೃಷಿಯಾಗಿದೆ ಎಂದು ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ.

ಪಕ್ಷದ ವಿರುದ್ಧ ಧ್ವನಿ ಎತ್ತಿ ಬಿಜೆಪಿಗೆ ಲಾಭ ಮಾಡಿಕೊಡುವುದೇ ಕೆಲವರ ಕಾಯಕವಾಗಿದೆ. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಜಿಲ್ಲೆಗೆ ಆಗಮಿಸಿ ವಿಧಾನಸಭಾ ಚುನಾವಣೆಯ ಸೋಲಿನ ಬಗ್ಗೆ ಮಾಹಿತಿ ಪಡೆದುಕೊಂಡ ಸಂದರ್ಭ ಸೋಲಿಗೆ ನೈಜ ಕಾರಣಕರ್ತರು ಯಾರು ಎನ್ನುವುದು ಸಾಬೀತಾಗಿದೆ. ಪಕ್ಷ ಆಯೋಜಿಸುವ ಜನಪರ ಹೋರಾಟಗಳಲ್ಲಿ ಭಾಗವಹಿಸದೆ ಪಕ್ಷದ ವಿಚಾರದಲ್ಲಿ ಮೂಗು ತೋರಿಸುವವರ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಮಂಜುನಾಥ್ ಕುಮಾರ್ ಹೇಳಿದ್ದಾರೆ.

 ಪಕ್ಷದೊಳಗೆ ಯಾವುದೇ ಗೊಂದಲಗಳು ಅಥವಾ ಒಳಜಗಳಗಳಿಲ್ಲ, ಪಕ್ಷ ವಿರೋಧಿಗಳ ಊಹಾಪೋಹಗಳಿಗೆ ಕಿವಿಗೊಡದೆ ಪಕ್ಷ ಸಂಘಟನೆಯನ್ನೇ ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ನನ್ನ ಪ್ರಾಮಾಣಿಕತೆಯ ಮೇಲೆ ವಿಶ್ವಾಸವಿಟ್ಟಿರುವ ಹೈಕಮಾಂಡ್ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ನನ್ನನ್ನು ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

See also  ಕೊಡಗಿನ ವೇಣುವಾದಕ ಸಹೋದರರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು