News Kannada
Friday, December 02 2022

ಕರ್ನಾಟಕ

ಸೀಬರ್ಡ್‌ಗೆ ಕದ್ರಾ ಜಲಾಶಯದಿಂದ ನೀರು: ಪ್ರಸ್ತಾವನೆ ಸಲ್ಲಿಸಲು ಡಿಸಿ ಸೂಚನೆ

Photo Credit :

ಸೀಬರ್ಡ್‌ಗೆ ಕದ್ರಾ ಜಲಾಶಯದಿಂದ ನೀರು: ಪ್ರಸ್ತಾವನೆ ಸಲ್ಲಿಸಲು ಡಿಸಿ ಸೂಚನೆ

ಕಾರವಾರ: ಸೀಬರ್ಡ್ ಯೋಜನೆಗೆ ಕದ್ರಾ ಜಲಾಶಯದಿಂದ ಕುಡಿಯುವ ನೀರಿನ ಸರಬರಾಜಿಗೆ ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಇಲಾಖೆಗೆ ಜಿಲ್ಲಾಧಿಕಾರಿ ಡಾ. ಹರೀಶ್‌ಕುಮಾರ್ ಕೆ. ಸೂಚಿಸಿದ್ದಾರೆ.

ಸೀಬರ್ಡ್ ಯೋಜನೆ ಸಂಬಂಧಿಸಿದಂತೆ ಇತ್ತೀಚೆಗಷ್ಟೆ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ತುರ್ತು ಅನುಷ್ಠಾನ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಉನ್ನತ ಅಧಿಕಾರಿಗಳ ಸಭೆ ನಡೆಸಿದರು.

ಸೀಬರ್ಡ್ ಯೋಜನೆ ಸಂಬಂಧಿಸಿದಂತೆ ಪ್ರಸ್ತಾವಿತ ಗಂಗಾವಳಿ ನದಿಯಿಂದ ನೀರು ಕೊಡುವ ಯೋಜನೆ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ಈಗಾಗಲೇ ವಿಳಂಬವಾಗಿದೆ. ಒಂದೊಮ್ಮೆ ಗಂಗಾವಳಿ ನದಿ ಬತ್ತಿ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಗಳೂ ಇರುವುದರಿಂದ ಹಾಗೂ ಪ್ರಸ್ತಾವಿತ ಗಂಗಾವಳಿ ನದಿ ಯೋಜನೆಗೆ 42 ಕಿಲೋ ಮೀಟರ್ ದೂರವಿದ್ದು ಕದ್ರಾ ಜಲಾಶಯದಿಂದ 30 ಕಿಲೋ ಮೀಟರ್ ದೂರವಿರುವುದರಿಂದ ಕದ್ರಾ ಜಲಾಶಯದಿಂದ ನೀರು ಸರಬರಾಜು ಮಾಡುವುದು ಸೂಕ್ತವಾಗುತ್ತದೆ. ಈ ಹಿನ್ನೆಲೆ ಕದ್ರಾ ಜಲಾಶಯದಿಂದ ಸೀಬರ್ಡ್ ಯೋಜನೆಗೆ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ಸಮೀಕ್ಷೆ ನಡೆಸಿ ಸಮಗ್ರ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಅವರು ನಗರ ನೀರು ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಪ್ರಸ್ತಾಪಿಸಿದ ವಿಷಯವನ್ನು ಸಭೆಯಲ್ಲಿ ಹಾಜರಿದ್ದ ಸೀಬರ್ಡ್ ಅಧಿಕಾರಿಗಳು ಸಮ್ಮತಿಸಿದರು. ಅಲ್ಲದೆ ಗಂಗಾವಳಿಗೆ ನಿರ್ಮಿಸಲು ಉದ್ದೇಶಿಸಿರುವ ವೆಂಟೆಡ್ ಬ್ಯಾರೇಜ್‌ಕೂಡ ಶೀಘ್ರ ಪೂರ್ಣಗೊಳಿಸುವ ಸಂಬಂಧ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸೀಬರ್ಡ್ ಯೋಜನೆಗೆ ಶಿರವಾಡದ ಕೊಂಕಣ ರೈಲ್ವೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ 220 ಕೆವಿ ವಿದ್ಯುತ್ ಉಪಸ್ಥಾವರ ಘಟಕಕ್ಕೆ ಅನುಮೋದನೆ ಪಡೆಯಲಾಗಿದ್ದು ಶೀಘ್ರ ಅನುಷ್ಠಾನವಾಗಲಿದೆ. ಈ ಬಗ್ಗೆ ಹುಬ್ಬಳಿ ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಿದರು.

ಅಂಕೋಲಾ ತಾಲೂಕು ಅಲಗೇರಿಯಲ್ಲಿ ಸೀಬರ್ಡ್ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ನಾಗರಿಕ ವಿಮಾನ ನಿಲ್ದಾಣ ಸಂಬಂಧಿಸಿದಂತೆ ಮುಂದಿನ ವಾರ ಮೂಲಸೌಲಭ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿಲ್ಲೆಗೆ ಆಗಮಿಸಲಿದ್ದು ಅವರು ಈ ಸಂಬಂಧ ಸಭೆ ನಡೆಸಲಿದ್ದಾರೆ ಎಂದರು.

See also  ಶಾಸಕ ಆನಂದ್ ಸಿಂಗ್ ಗೆ ಹಲ್ಲೆ ಪ್ರಕರಣ ಸಣ್ಣ ವಿಚಾರವಂತೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು