News Kannada
Sunday, November 27 2022

ಕರ್ನಾಟಕ

ಅಕ್ರಮ ಸಕ್ರಮ ತಿರಸ್ಕೃತಗೊಂಡ ಅರ್ಜಿ: ಪುನರ್ ಪರಿಶೀಲನೆಗೆ ಶಾಸಕ ಕೆ.ಜಿ.ಬೋಪಯ್ಯ ಸೂಚನೆ - 1 min read

Photo Credit :

ಅಕ್ರಮ ಸಕ್ರಮ ತಿರಸ್ಕೃತಗೊಂಡ ಅರ್ಜಿ: ಪುನರ್ ಪರಿಶೀಲನೆಗೆ ಶಾಸಕ ಕೆ.ಜಿ.ಬೋಪಯ್ಯ ಸೂಚನೆ

ಮಡಿಕೇರಿ: ಅಕ್ರಮ ಸಕ್ರಮ ಯೋಜನೆಯಡಿ ಅರ್ಹರಿಗೆ ಮನೆ ನಿರ್ಮಿಸಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ 94ಸಿ, 94ಸಿಸಿ ರಡಿ ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸುವಂತೆ ತಹಶೀಲ್ದಾರರಿಗೆ ಶಾಸಕದ ಕೆ.ಜಿ.ಬೋಪಯ್ಯ ಅವರು ಸೂಚಿಸಿದ್ದಾರೆ.

ನಗರದ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ರಮ ಸಕ್ರಮ ಯೋಜನೆಯಡಿ ಸಲ್ಲಿಕೆಯಾದ 1653 ಅರ್ಜಿಗಳು ತಿರಸ್ಕೃತವಾಗಲು ಕಾರಣವೇನು? ಬಡವರು ಮನೆ ನಿರ್ಮಿಸಿಕೊಳ್ಳುವುದು ಬೇಡವೇ? ಆದ್ದರಿಂದ ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ ವರದಿ ನೀಡುವಂತೆ ಕೆ.ಜಿ.ಬೋಪಯ್ಯ ಅವರು ನಿರ್ದೇಶನ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ಮಹೇಶ್ ಅವರು ಮಡಿಕೇರಿ ತಾಲ್ಲೂಕಿನಲ್ಲಿ 94ಸಿ ರಡಿ 2,443 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ 530 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ. ಉಳಿದಂತೆ 1653 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಅವರು, ಎಲ್ಲವನ್ನೂ ಅರಣ್ಯ ಎಂದು ಹೇಳಿಕೊಂಡು ಹೋದರೆ ಬಡ ಜನರಿಗೆ ಮನೆ ಕಟ್ಟಿಕೊಡುವುದು ಬೇಡವೇ ಎಂದು ಅವರು ಪ್ರಶ್ನಿಸಿದರು.

ಶಾಸಕರಾದ ಕೆ.ಜಿ.ಬೋಪಯ್ಯ ಅವರ ಮನೆ ಅರಣ್ಯಕ್ಕೆ ಸೇರಿದ್ದರೆ, ಅರಣ್ಯ ಭವನದ ಜಾಗ ಎಲ್ಲಿಯದು. ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದು ವಿಧಾನ ಪರಿಷತ್ ಸದಸ್ಯರು ಸಲಹೆ ಮಾಡಿದರು.

ಅರಣ್ಯವೂ ಸಹ ಉಳಿಯಬೇಕು. ಜನರು ಸಹ ಬದುಕಬೇಕು. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಶಬರಿಮಲೆಯಲ್ಲಿ ದೇವಸ್ಥಾನ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಸಹಕರಿಸುತ್ತಾರೆ. ಆದರೆ ಕೊಡಗು ಜಿಲ್ಲೆಯಲ್ಲಿ ಬೇರೆ ಕಾನೂನು ಇದೆಯೇ ಎಂದು ಸನಿಲ್ ಸುಬ್ರಮಣಿ ಅವರು ಖಾರವಾಗಿ ಪ್ರಶ್ನಿಸಿದರು.

ವಿದ್ಯುತ್ ಸಂಪರ್ಕ, ಕುಡಿಯುವ ನೀರು, ಅಂಗನವಾಡಿ, ಶಾಲಾ ಕಟ್ಟಡ ನಿರ್ಮಾಣ ಮಾಡಲು ಬಿಡುತ್ತಿಲ್ಲ ಎಂಬ ಬಗ್ಗೆ ಸಾಕಷ್ಟು ದೂರುಗಳು ಬರುತ್ತವೆ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸದಿದ್ದರೆ ಹೇಗೆ ಎಂದು ಸುನಿಲ್ ಸುಬ್ರಮಣಿ ಅವರು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ದೇವಸ್ಥಾನ ನಿರ್ಮಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಬಿಡುತ್ತಿಲ್ಲ. ಹೀಗಾದರೆ ಹೇಗೆ. ಸ್ಥಳೀಯ ಜನರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಿ ಎಂದು ಅವರು ಸಲಹೆ ಮಾಡಿದರು.

See also  ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ರಾಜೀನಾಮೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು