News Kannada
Saturday, November 26 2022

ಕರ್ನಾಟಕ

ನೊಂದವರಿಗೆ ನ್ಯಾಯ ಕೊಡಿಸಲು ಶ್ರಮಿಸಿ: ಪೊಲೀಸರಿಗೆ ನ್ಯಾಯಾಧೀಶ ವಿ.ವಿ.ಮಲ್ಲಾಪುರ ಸಲಹೆ - 1 min read

Photo Credit :

ನೊಂದವರಿಗೆ ನ್ಯಾಯ ಕೊಡಿಸಲು ಶ್ರಮಿಸಿ: ಪೊಲೀಸರಿಗೆ ನ್ಯಾಯಾಧೀಶ ವಿ.ವಿ.ಮಲ್ಲಾಪುರ ಸಲಹೆ

ಮಡಿಕೇರಿ: ಪೊಲೀಸರು ಯಾವುದೇ ರೀತಿಯ ಪ್ರಕರಣಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಾಗ ಬಲವಾದ ಸಾಕ್ಷಿ ಸಹಿತ ಸಲ್ಲಿಕೆ ಮಾಡಬೇಕು. ಜೊತೆಗೆ ಸರ್ಕಾರಿ ಅಭಿಯೋಜಕರಿಗೆ ಕಾಲ ಕಾಲಕ್ಕೆ ಮಾಹಿತಿ ಒದಗಿಸಿ ನೊಂದವರಿಗೆ ನ್ಯಾಯ ದೊರಕಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಸಲಹೆ ನೀಡಿದ್ದಾರೆ.

ನಗರದ ಹೊರ ವಲಯದಲ್ಲಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ‘ಕಾನೂನು ಅರಿವು ಕಾರ್ಯಾಗಾರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿ ನಮ್ಮ ಕೆಲಸ ಮುಗಿಯಿತು ಎಂದು ಕೈತೊಳೆದುಕೊಳ್ಳುವುದು ಸರಿಯಲ್ಲ. ಪೊಲೀಸ್ ಠಾಣಾಧಿಕಾರಿಯಾಗಿ ಯಾರೇ ಕರ್ತವ್ಯ ನಿರ್ವಹಿಸಿದರೂ ಸಹ, ಸಹೊದ್ಯೋಗಿ ಸಿಬ್ಬಂದಿ ಜತೆ ಚರ್ಚಿಸಿ ಸರ್ಕಾರಿ ಅಭಿಯೋಜಕರಿಗೆ ಸಂಬಂಧಪಟ್ಟ ಪ್ರಕರಣ ಬಗ್ಗೆ ಸಾಕ್ಷಿ ಒದಗಿಸಿ ನ್ಯಾಯ ಕೊಡಿಸಲು ಪ್ರಯತ್ನಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ತಿಳಿಸಿದರು.

ಸಿವಿಲ್, ಕ್ರಿಮಿನಲ್ ಹೀಗೆ ಯಾವುದೇ ರೀತಿಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಭಿನ್ನ ಭಿನ್ನ ತೀರ್ಪುಗಳು ಬರುತ್ತವೆ. ಇದಕ್ಕೆ ನ್ಯಾಯಾಲಯ, ಪೊಲೀಸರು, ಅಭಿಯೋಜಕರನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ವಿ.ವಿ.ಮಲ್ಲಾಪುರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ತನಿಖಾಧಿಕಾರಿ ತನಿಖೆ ಮಾಡುವ ಸಂದರ್ಭ ಹಾಗೂ ನ್ಯಾಯಾಲಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ನಿಯೋಜಿಸಿರುವ ಪೊಲೀಸರು ಕಡ್ಡಾಯವಾಗಿ ಹಾಜರಾಗಬೇಕು. ನ್ಯಾಯಾಲಯದಲ್ಲಿ ಸಂಬಂಧಪಟ್ಟ ಪ್ರಕರಣವನ್ನು ವಿಚಾರಣೆ ಮಾಡುವ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಸಂಬಂಧಪಟ್ಟ ಪೊಲೀಸರೇ ಇರುವುದಿಲ್ಲ. ಹೀಗಾದರೆ ಹೇಗೆ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ಸರಿಯಾಗಿ ತನಿಖೆ ಮಾಡಿ ಅಭಿಯೋಜಕರಿಗೆ ವರದಿ ಸಲ್ಲಿಸಿದಾಗ ಅಭಿಯೋಜಕರು ವಾದ ಮಂಡಿಸಲು ಸಹಕಾರಿಯಾಗುತ್ತದೆ. ಇದರಿಂದ ನೊಂದವರಿಗೆ ನ್ಯಾಯ ದೊರಕಿಸಲು ಸಾಧ್ಯ. ಆದ್ದರಿಂದ ತನಿಖಾಧಿಕಾರಿಗಳು ಹೆಚ್ಚಿನ ಅಧ್ಯಯನ ಮಾಡಿ, ನೊಂದವರಿಗೆ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೊಡಗು ಜಿಲ್ಲಾ ಪೊಲೀಸ್ ನೂತನ ‘ಫೇಸ್‍ಬುಕ್’ ಪೇಜ್ ಅನ್ನು ಉದ್ಘಾಟಿಸಿ ಮಾತನಾಡಿ, ಆಡಳಿತಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದಾಗ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಚರ್ಚಿಸಿ ಕೆಲವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಆ ದಿಸೆಯಲ್ಲಿ ದಿನದ 24 ಗಂಟೆಯೂ ಸಹ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ ಎಂದು ಅವರು ಹೇಳಿದರು.

ಭಾರತೀಯ ನಾಗರಿಕ ಸೇವಾ(ಐಎಎಸ್) ಅಧಿಕಾರಿಗಳಿಗೆ 5 ಹಂತದಲ್ಲಿ ತರಬೇತಿ ನೀಡಲಾಗುತ್ತದೆ. ಅದೇ ರೀತಿ ತಳಮಟ್ಟದ ಅಧಿಕಾರಿಗಳಿಗೂ ಸಹ ತರಬೇತಿ ಅಗತ್ಯ. ಜಿಲ್ಲಾ, ತಾಲ್ಲೂಕು ಮಟ್ಟದ ದಂಡಾಧಿಕಾರಿಗಳು ಸಮಸ್ಯೆಗಳು ಎದುರಾದಾಗ ಕೆಲವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನಿರ್ಧಾರ ತೆಗೆದುಕೊಳ್ಳಲು ಕಾನೂನು, ಕಾಯ್ದೆಗಳ ಬಗ್ಗೆ ಹೆಚ್ಚಿನ ಜ್ಞಾನಾರ್ಜನೆ ಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

See also  ಗುಂಡ್ಲುಪೇಟೆಯಲ್ಲಿ ಕೆರೆಗೆ ನೀರು ಹಾಯಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು