News Kannada
Sunday, December 04 2022

ಕರ್ನಾಟಕ

ಮಡಿಕೇರಿ ದಸರಾ ಜನೋತ್ಸವಕ್ಕೆ ಅಗತ್ಯ ಸಹಕಾರ : ಸಚಿವ ವಿ.ಸೋಮಣ್ಣ ಭರವಸೆ

Photo Credit :

ಮಡಿಕೇರಿ ದಸರಾ ಜನೋತ್ಸವಕ್ಕೆ ಅಗತ್ಯ ಸಹಕಾರ : ಸಚಿವ ವಿ.ಸೋಮಣ್ಣ ಭರವಸೆ

ಮಡಿಕೇರಿ: ಮಡಿಕೇರಿ ದಸರಾ ಜನೋತ್ಸವಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಡಿಕೇರಿ ದಸರಾ ಕಾರ್ಯಕ್ರಮಗಳ ಭಿತ್ತಿಪತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ದಸರಾ ಉತ್ಸವಕ್ಕೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುವಂತೆ ದಸರಾ ಸಮಿತಿ ಮತ್ತು ಅಧಿಕಾರಿಗಳಿಗೆ ಸಲಹೆ ನೀಡಿದರು.

ಶಾಸಕರುಗಳ ಸಲಹೆ, ಸೂಚನೆಗಳನ್ನು ಪಡೆದು ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಈ ಸಂದರ್ಭ ಮಾತನಾಡಿದ ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ದಸರಾ ಜನೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ನಗರದ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ತ್ವರಿತವಾಗಿ ನಡೆಯಬೇಕಾಗಿದೆ ಎಂದರು.

ದಸರಾದ ಎಲ್ಲಾ ಕಾರ್ಯಕ್ರಮಗಳಿಗೆ ಆಗಮಿಸುವಂತೆ ಸಚಿವ ಸೋಮಣ್ಣ ಅವರಿಗೆ ಇದೇ ಸಂದರ್ಭ ಸಮಿತಿ ಅಧಿಕೃತ ಆಹ್ವಾನ ನೀಡಿತು. ಶಾಸಕದ್ವಯರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಎಸ್‍ಪಿ ಡಾ.ಸುಮನ್ ಡಿ. ಪನ್ನೇಕರ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ತಲಕಾವೇರಿ ತುಲಾ ಸಂಕ್ರಮಣ ಜಾತ್ರೆ ಅಗತ್ಯ ಸಿದ್ಧತೆಗೆ ಸೂಚನೆ
ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅ.17 ಮತ್ತು 18 ರಂದು ನಡೆಯುವ ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶ್ರೀಕಾವೇರಿ ತೀರ್ಥೋದ್ಭವದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಸಚಿವರು, ಶ್ರೀ ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವುದು, ರಸ್ತೆ ಸರಿಪಡಿಸುವುದು, ಬಸ್ ಸೌಲಭ್ಯ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

See also  ಬಂಡೀಪುರದಲ್ಲಿ 20 ಅಡಿ ಉದ್ದದ ಹೆಬ್ಬಾವು ರಕ್ಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು