News Kannada
Monday, December 05 2022

ಕರ್ನಾಟಕ

ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ: 49 ಪ್ರಕರಣ ದಾಖಲು

Photo Credit :

ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ: 49 ಪ್ರಕರಣ ದಾಖಲು

ಕಾರವಾರ: ತಂಬಾಕು ನಿಯಂತ್ರಣ ಕೋಶದ ಸಮಿತಿ ಅಧಿಕಾರಿಗಳು ಕಾರವಾರ ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಮಾರಾಟ ಮಾಡುತ್ತಿದ್ದ ತಂಬಾಕು ಹಾಗೂ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡು ದಂಡ ವಿಧಿಸಿದ್ದಾರೆ.

ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಒಟ್ಟೂ 49 ಪ್ರಕರಣಗಳನ್ನು ದಾಖಲಿಸಿದ್ದು, ದಂಡ ವಸೂಲಿ ಮಾಡಿದ್ದಾರೆ. ಈ ಹಿಂದೆಯೇ ತಂಬಾಕು ನಗರದ ಅಂಗಡಿಕಾರರಿಗೆ ತಂಬಾಕು ಹಾಗೂ ಅದರ ಉತ್ಪನ್ನಗಳು ಮಾರಾಟ ಕಾನೂನು ಬಾಹೀರ ಎಂದು ಎಚ್ಚರಿಸಿತ್ತು.

ತಂಬಾಕು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಫಲಕ ಅಳವಡಿಸುವಂತೆ ಅಂಗಡಿಕಾರರಗೆ ಸೂಚನೆ ನೀಡಲಾಗಿತ್ತು. ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಡಾ. ಪ್ರೇಮಕುಮಾರ ನಾಯ್ಕ, ತಾಲೂಕಾ ಆರೋಗ್ಯಾಧಿಕಾರಿ ಡಾ. ಸೂರಜಾ ನಾಯಕ, ನಗರಠಾಣೆ ಎಸ್ಸೈ ನವೀನಕುಮಾರ ನಾಯ್ಕ, ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಇದ್ದರು.

 

See also  ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು: ಎ.ಎನ್. ಮಹೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು