News Kannada
Thursday, December 08 2022

ಕರ್ನಾಟಕ

ಮೂಲ ವಿಜ್ಞಾನದ ಕುರಿತು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ

Photo Credit :

ಮೂಲ ವಿಜ್ಞಾನದ ಕುರಿತು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ

ಮಡಿಕೇರಿ: ಮೂಲ ವಿಜ್ಞಾನದ ಅಧ್ಯಯನ ಮತ್ತು ಸಂಶೋಧನೆಯಿಂದ ಜಗತ್ತಿನ ಹತ್ತು ಹಲ ಸಮಸ್ಯೆಗಳಿಗೆ ಪರಿಹಾರ ದೊರಕುವ ಸಾಧ್ಯತೆಗಳು ಇರುವ ಹಿನ್ನೆಲೆ, ವಿದ್ಯಾರ್ಥಿಗಳಿಗೆ ಮೂಲ ವಿಜ್ಞಾನದತ್ತ ಆಸಕ್ತಿ ಮೂಡಿಸುವ ಕೆಲಸವಾಗಬೇಕಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಗರದ ಭಾರತೀಯ ವಿದ್ಯಾಭವನದ ಕೊಡಗು ವಿದ್ಯಾಲಯದಲ್ಲಿ ನಡೆದ ‘ಅವಲೋಕನ’ ಎನ್ನುವ ವಿಜ್ಞಾನ ಮೇಳವನ್ನು ವಿದ್ಯಾರ್ಥಿಗಳ ಸಹಕಾರದೊಂದಿಗೆ ವೈಜ್ಞಾನಿಕ ಪ್ರಯೋಗವೊಂದನ್ನು ಮಾಡುವ ಮೂಲಕ ಸಚಿವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಪ್ರಸ್ತುತ ಇಂಜಿನಿಯರಿಂಗ್ ಮೊದಲಾದ ವ್ಯಾಸಂಗದತ್ತ ಆಸಕ್ತರಾಗುತ್ತಿದ್ದು, ಮೂಲ ವಿಜ್ಞಾನದತ್ತ ಗಮನ ಹರಿಸುತ್ತಿಲ್ಲ ಎಂದು ವಿಷಾದಿಸಿದರು.

ಡಾ.ಕಸ್ತೂರಿರಂಗನ್, ಸಿ.ಎನ್.ಆರ್.ರಾವ್ ಮೊದಲಾದ ವಿಜ್ಞಾನಿಗಳು ಮೂಲ ವಿಜ್ಞಾನದ ಕಲಿಕೆಯ ಮೂಲಕ ಸಂಶೋಧನೆಗಳು ನಡೆಯಬೇಕಿರುವ ಮಹತ್ವದ ಬಗ್ಗೆ ಹೇಳಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದ ಮೂಲಕ ಸಂಶೋಧನಾ ಹಾದಿಯಲ್ಲಿ ಸಾಗುವಂತೆ ಕರೆ ನೀಡಿದರು.

ಶಿಕ್ಷಣ ವ್ಯವಹಾರ ಇಂದಿನ ದಿನಗಳಲ್ಲಿ ಶಿಕ್ಷಣವೆನ್ನುವುದು ವ್ಯವಹಾರವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಸಚಿವ ಸುರೇಶ್ ಕುಮಾರ್, ಶಿಕ್ಷಣ ನೀಡುವುದನ್ನು ಸೇವೆ ಎಂದು ಪರಿಗಣಿಸುವ ಚಿಂತನೆ ದೂರವಾಗಿದೆ ಎಂದು ಅಭಿಪ್ರಾಯಪಟ್ಟರು.

ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಅಧ್ಯಕ್ಷ ಕೆ.ಪಿ.ಉತ್ತಪ್ಪ ಮಾತನಾಡಿ, ವಿಜ್ಞಾನ ಮೇಳಗಳು ವಿದ್ಯಾರ್ಥಿಗಳ ಕಲಿಕೆಯ ಆಸಕ್ತಿಯನ್ನು ಪ್ರೋತ್ಸಾಹಿಸಲು ಸಹಕಾರಿಯಾಗಿದೆ ಎಂದರು. ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕೆಂದರು.

ಸನ್ಮಾನ

ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಅಧ್ಯಕ್ಷ ಕೆ.ಎಸ್.ದೇವಯ್ಯ ಹಾಗೂ ಕೊಡಗು ವಿದ್ಯಾಲಯದ ಅಧ್ಯಕ್ಷರಾದ ಕೆ.ಪಿ.ಉತ್ತಪ್ಪ ಅವರು ಸಚಿವ ಸುರೇಶ್ ಕುಮಾರ್ ಅವನ್ನು ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶಾಲೆಯ ಚಿನ್ಮಯ ಪಿ. ಮತ್ತು ದ್ವಿತೀಯ ಸ್ಥಾನ ಪಡೆ ಲೇಖನಾ ಮುತ್ತಕ್ಕಿ ಅವರನ್ನು ಸಚಿವರು ಪುರಸ್ಕರಿಸಿ ಪ್ರೋತ್ಸಾಹಿಸಿದರು.

ವೇದಿಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಚ್ಚಾಡೋ ಹಾಗೂ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ವಿದ್ಯಾ ಹರೀಶ್ ಉಪಸ್ಥಿತರಿದ್ದರು.

See also  ಕಾಸರಗೋಡಿನಲ್ಲಿ ಭಾರೀ ಮಳೆ: 3.70 ಕೋಟಿ ರೂ ಕೃಷಿ ಹಾನಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು