News Kannada
Tuesday, November 29 2022

ಕರ್ನಾಟಕ

ತಲಾಕಾವೇರಿ ಕೊಳದಲ್ಲಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ಬಳಕೆ ಸಂಪೂರ್ಣ ನಿಷೇಧ : ಶಾಸಕ ಕೆ.ಜಿ.ಬೊಪಯ್ಯ ಸೂಚನೆ - 1 min read

Photo Credit :

ತಲಾಕಾವೇರಿ ಕೊಳದಲ್ಲಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ಬಳಕೆ ಸಂಪೂರ್ಣ ನಿಷೇಧ : ಶಾಸಕ ಕೆ.ಜಿ.ಬೊಪಯ್ಯ ಸೂಚನೆ

ಮಡಿಕೇರಿ: ಭಾಗಮಂಡಲ, ತಲಕಾವೇರಿ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಮದ್ಯ ಸೇವನೆ ಸಂಪೂರ್ಣ ನಿಷೇಧವಾಗಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಶಾಸಕರಾದ ಕೆ.ಜಿ.ಬೊಪಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ತಲಕಾವೇರಿ ತೀರ್ಥೋದ್ಬವ ಜಾತ್ರೆ ಸಂಬಂಧ ಭಾಗಮಂಡಲದ ಮುಡಿ ಕಟ್ಟಡದಲ್ಲಿ ಶನಿವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಕೆ.ಜಿ.ಬೊಪಯ್ಯ ಅವರು ಕ್ಷೇತ್ರದಲ್ಲಿ ಧಾರ್ಮಿಕ ವಿದಿ­ü ವಿಧಾನಗಳಿಗೆ ಯಾವುದೇ ಚ್ಯುತಿ ಬಾರದಂತೆ ನಡೆದು ಕೊಳ್ಳಬೇಕು. ಹಾಗೂ ಇಲ್ಲಿನ ಆಚಾರ ವಿಚಾರಕ್ಕೆ ಬದ್ಧರಾಗಿ ಯಾತ್ರಿಗಳು ನಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಕಾವೇರಿ ತೀರ್ಥೋದ್ಬವ ಸಂದರ್ಭದಲ್ಲಿ ಕೊಳದಿಂದ ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲಿಗಳಿಂದ ತೀರ್ಥವನ್ನು ಶೇಖರಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಲಾಗಿದ್ದು ಇದನ್ನು ತಪ್ಪದೆ ಪಾಲನೆ ಮಾಡಬೇಕೆಂದು ಶಾಸಕರು ತಿಳಿಸಿದರು.

ತಲಕಾವೇರಿ ಜಾತ್ರೆ ಸಂಬಂಧ ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸರ್ಕಾರವು 20 ಲಕ್ಷ ರೂ. ಬಿಡುಗಡೆ ಮಾಡಿದ್ದು, ಅಗತ್ಯ ತುರ್ತು ಕಾಮಗಾರಿಗೆ ಆದ್ಯತೆ ನೀಡಿ ಪೂರ್ಣ ಗೊಳಿಸಬೇಕು. ಜೊತೆಗೆ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಿದರು. ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಕಾರ್ಯ ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಲಾ ಸಂಕ್ರಮಣ ತೀರ್ಥೋದ್ಬವ ಕಾರ್ಯಕ್ರಮದ ಆಚಾರ, ವಿಚಾರ, ಶ್ರದ್ಧೆ, ಭಕ್ತಿಗೆ ಯಾವುದೇ ಧಕ್ಕೆ ಬಾರದಂತೆ ನಡೆಯಲು ಎಲ್ಲ್ಲರ ಸಹಕಾರ ಅತ್ಯಗತ್ಯವಾಗಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಶಾಸಕರು ತಿಳಿಸಿದರು.

ಜಾತ್ರೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡು ಸಾರ್ವಜನಿಕರಿಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಈ ಸಂಬಂಧ ಮಾಹಿತಿ ನೀಡಿದ ಮಡಿಕೇರಿ ವಿಭಾಗದ ಡಿವೈಎಸ್‍ಪಿ ದಿನೇಶ್ ಕುಮಾರ್ ಅವರು ಜಾತ್ರೆ ಸಂದರ್ಭದಲ್ಲಿ ಐನೂರು ಜನ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದ್ದು, ಪಾಳಿಯ ಮೇಲೆ ಕರ್ತವ್ಯ ನಿರ್ವಹಿಸಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಭಾಗಮಂಡಲ ಗ್ರಾಮ ಪಂಚಾಯಿತಿ ಕಸ ವಿಲೇವಾರಿಗೆ ತಣ್ಣಿಮಾಣಿ ಗ್ರಾಮ ವ್ಯಾಪ್ತಿಯಲ್ಲಿ ಈಗಾಗಲೆ ಜಾಗ ಗುರುತಿಸಿದ್ದು, ಅರಣ್ಯ ಇಲಾಖೆ ಇದಕ್ಕೆ ಸಹಕರಿಸದೆ ಇರುವುದಕ್ಕೆ ತೀವ್ರ ಅಸಮದಾನ ವ್ಯಕ್ತಪಡಿಸುತ್ತ, ತಣ್ಣಿಮಾಣಿ ಗ್ರಾಮದಲ್ಲಿ ಕಸವಿಲೆವಾರಿ ಘಟಕ ನಿರ್ಮಾಣಕ್ಕೆ ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ ಕೆ.ಜಿ.ಬೊಪಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಭಾಗಮಂಡಲ ಗ್ರಾಮದಲ್ಲಿ ನೆನೆಗುದ್ದಿಗೆ ಬಿದ್ದಿರುವ ಒಳಚರಂಡಿ ನಿರ್ಮಾಣ ಯೋಜನೆ ಮರು ಚಾಲನೆಗೆ ಕ್ರಮವಹಿಸಬೇಕೆಂದು ಸಂಭಂದಪಟ್ಟ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

See also  ಅರೆನಗ್ನ ಸ್ಥಿತಿಯಲ್ಲಿ ಪ.ಪಂ ಎಫ್ಡಿಸಿಯ ಮೃತದೇಹ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು