News Kannada
Friday, December 09 2022

ಕರ್ನಾಟಕ

ಜನ ಸಾಮಾನ್ಯರಿಗೆ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸಿ : ಜಿಲ್ಲಾಧಿಕಾರಿ ಸೂಚನೆ

Photo Credit :

ಜನ ಸಾಮಾನ್ಯರಿಗೆ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸಿ : ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ:ಜನ ಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಮಗ್ರ ಸಾರಿಗೆ ಅಭಿವೃದ್ಧಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ಮಾಲಿಕರು ಒಟ್ಟಾಗಿ ಸಮೀಕ್ಷೆ ನಡೆಸಿದ ವರದಿಯನ್ನು 15 ದಿನದೊಳಗೆ ನೀಡುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಳ್ಳಿ ಅವರು 15 ವರ್ಷ ಮೀರಿದ ವಾಹನಗಳ ರಹದಾರಿ ನವೀಕರಣಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳು ಹಾಗೂ ಹೊಸ ಮಾರ್ಗಗಳ ಪರವಾನಗಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಹೈಕೋರ್ಟ್ ಆದೇಶದಂತೆ ವಾಯಿದೆ ಮುಗಿದಿರುವ ವಾಹನಗಳ ರಹದಾರಿ ನವೀಕರಣ ಮಾಡುವಂತೆ ಸೂಚನೆ ನೀಡಿದರು.

ಖಾಸಗಿ ಬಸ್ ಮಾಲಿಕರು ಕುಶಾಲನಗರ ಖಾಸಗಿ ಬಸ್ ನಿಲ್ದಾಣದಲ್ಲಿ ಯಾವುದೇ ಮೂಲಭೂತ ಸೌಲಭ್ಯವಿಲ್ಲದಿರುವ ಕುರಿತು ಸಭೆಯ ಗಮನಕ್ಕೆ ತಂದರು. ಹಾಗೂ ಕೆಎಸ್‍ಆರ್‍ಟಿಸಿ ಬಸ್‍ಗಳು ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವುದಕ್ಕೆ ಅಸಮಾದಾನ ವ್ಯಕ್ತಪಡಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿ ಜಿಲ್ಲಾಧಿಕಾರಿ ಅವರು ಕೆಎಸ್‍ಆರ್‍ಟಿಸಿ ವಿಭಾಗ ವ್ಯವಸ್ಥಾಪಕರಿಗೆ ಕಡ್ಡಾಯವಾಗಿ ಕೆಎಸ್‍ಆರ್‍ಟಿಸಿ ಬಸ್‍ಗಳು ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದಂತೆ ಈ ಹಿಂದೆ ಜಾರಿಯಾಗಿರುವ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ತಾಕೀತು ಮಾಡಿದರು.

ಕುಶಾಲನಗರ ಖಾಸಗಿ ಬಸ್ ನಿಲ್ದಾಣದಲ್ಲಿ ಇರುವಂತಹ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಖಾಸಗಿ ಬಸ್ ಮಾಲಿಕರ ಸಂಘದ ಸದಸ್ಯರುಗಳು ಜಿಲ್ಲೆಯಲ್ಲಿ ಈಗಾಗಲೇ ಅವಶ್ಯವಿರುವ ಕಡೆಗಳಲ್ಲಿ ಖಾಸಗಿ ಬಸ್‍ಗಳು ಸಂಚರಿಸುತ್ತಿದ್ದು, ಇವುಗಳ ರಹದಾರಿಯನ್ನು ಮುಂದುವರಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ.ಅವರು ಮಾತನಾಡಿ ಮಡಿಕೇರಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ಪ್ರದೇಶ ಹಾಗೂ ವಾಹನ ನಿಲುಗಡೆ ನಿಷೇಧಿತ ಸ್ಥಳಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಸದ್ಯದಲ್ಲಿಯೇ ಪೊಲೀಸ್ ಇಲಾಖೆಯಿಂದ ವಾಹನ ನಿಲುಗಡೆ ಪ್ರದೇಶ/ ನಿಲುಗಡೆ ನಿಷೇಧಿತ ಸ್ಥಳಗಳ ಆದೇಶ ಹೊರಡಿಸಲಾಗುವುದು ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಸಾರಿಗೆ ಇಲಾಖೆಯ ಅಧೀಕ್ಷಕರಾದ ಶಿವಣ್ಣ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕರಾದ ಗೀತಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರೇವಣ್ಣ, ನಗರಾಭಿವೃದ್ಧಿ ಇಲಾಖೆಯ ಸಂಜೀವ್ ಇತರರು ಇದ್ದರು.

ರಸ್ತೆ ಸುರಕ್ಷತಾ ಸಮಿತಿ ಸಭೆ:-ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.

See also  ಎಂಟನೇ ಬಾರಿ ಅಂಬಾರಿ ಹೊರಲಿರುವ ಅರ್ಜುನನಿಗೆ ಇದು ಕಡೆ ಅವಕಾಶ

ಸಭೆಯಲ್ಲಿ ರಾಜಾಸೀಟು ಬಳಿ ವಾಹನ ನಿಲುಗಡೆ ಕಾಮಗಾರಿ ಸಂಬಂಧಿಸಿದ ಮಾಹಿತಿಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.

ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಾದ್ಯಂತ ವಿಶೇಷವಾಗಿ ಗೋಣಿಕೊಪ್ಪ ಮತ್ತು ಕುಶಾಲನಗರ ಪಟ್ಟಣದಲ್ಲಿ ಏಕಮುಖ ಸಂಚಾರ ವ್ಯವಸ್ಥೆಗೆ ಹೊರಡಿಸಲಾದ ಅಧಿಸೂಚನೆ ಅನುಸಾರ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ, ಶೌಚಾಲಯ, ವಿದ್ಯುತ್ ಸಂಪರ್ಕ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು