News Kannada
Sunday, December 04 2022

ಕರ್ನಾಟಕ

ಸಚಿವ ಆರ್.ಅಶೋಕ್ ಕೊಡಗು ಜಿಲ್ಲಾಧಿಕಾರಿ ಕಚೇರಿಗೆ ದಿಢೀರ್ ಭೇಟಿ

Photo Credit :

ಸಚಿವ ಆರ್.ಅಶೋಕ್ ಕೊಡಗು ಜಿಲ್ಲಾಧಿಕಾರಿ ಕಚೇರಿಗೆ ದಿಢೀರ್ ಭೇಟಿ

ಮಡಿಕೇರಿ: ಹಲವು ವರ್ಷಗಳಿಂದ ಪಟ್ಟೆದಾರರ ಹೆಸರಿನಲ್ಲಿರುವ ಆರ್‍ಟಿಸಿಯನ್ನು ವಾರಸುದಾರರ ಹೆಸರಿಗೆ ಖಾತೆ ಮಾಡಲು ‘ಆಂದೋಲನ’ ಮಾದರಿಯಲ್ಲಿ ಕಾರ್ಯಕ್ರಮ ಆರಂಭಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಂದಾಯ ಸಚಿವರಾದ ಆರ್.ಅಶೋಕ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಇತರರ ಉಪಸ್ಥಿತಿಯಲ್ಲಿ ನಡೆದ ಚರ್ಚೆ ಸಂದರ್ಭದಲ್ಲಿ ಸಚಿವರು ಸಲಹೆ ಮಾಡಿದರು.

ಖಾತೆ ಬದಲಾವಣೆ ಸಂಬಂಧಿಸಿದಂತೆ ಸಮಸ್ಯೆ ಇರುವುದನ್ನು ಒಂದು ಕಡೆ ಮಾಡಿ, ಸಮಸ್ಯೆ ಇಲ್ಲದಿರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಸಮಸ್ಯೆ ಇದೆ ಎಂದು ಎಲ್ಲಾ ಕಡತಗಳನ್ನು ಬದಿಗೆ ಸರಿಸುವುದು ಸರಿಯಲ್ಲ. ಆದ್ದರಿಂದ ಈ ಬಗ್ಗೆ ವ್ಯಾಪಕ ಮಾಹಿತಿ ನೀಡಿ, ಸಮರೋಪಾದಿಯಲ್ಲಿ ಖಾತೆ ಬದಲಾವಣೆಗೆ ಮುಂದಾಗುವಂತೆ ಜಿಲ್ಲಾಧಿಕಾರಿಯವರಿಗೆ ಕಂದಾಯ ಸಚಿವರು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಅಜ್ಜ ತಾತಂದಿರ ಹೆಸರಿನಿಂದ ಮಕ್ಕಳಿಗೆ ಖಾತೆ ಬದಲಾವಣೆ ಆಗದಿರುವುದರಿಂದ ಸರ್ಕಾರದ ಸೌಲಭ್ಯ ಪಡೆದುಕೊಳ್ಳುವುದು ಕಷ್ಟವಾಗಿದೆ. ಆದ್ದರಿಂದ ಖಾತೆ ಬದಲಾವಣೆ ಆಂದೋಲನವನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು.

ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಖಾತೆ ಬದಲಾವಣೆ ಸಂಬಂಧಿಸಿದಂತೆ ಪಟ್ಟೆದಾರರ ಆಂದೋಲನ ಹಮ್ಮಿಕೊಂಡಲ್ಲಿ ಇಲ್ಲಿನ ಜನರಿಗೆ ದೊಡ್ಡ ಉಪಕಾರ ಮಾಡಿದಂತಾಗುತ್ತದೆ. ಆ ನಿಟ್ಟಿನಲ್ಲಿ ಪ್ರಥಮ ಆದ್ಯತೆ ನೀಡುವಂತಾಗಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿನ ತೋಟಗಳಲ್ಲಿ ಮನೆ ನಿರ್ಮಿಸಲು ಹಾಗೂ ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುತ್ತಿಲ್ಲ. ಇದರಿಂದಾಗಿ ಜಿಲ್ಲೆಯ ಜನರಿಗೆ ತುಂಬಾ ತೊಂದರೆಯಾಗಿದೆ ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಕಂದಾಯ ಸಚಿವರ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಕಚೇರಿಗೆ ದಿಢೀರ್ ಭೇಟಿ
ಕಂದಾಯ ಸಚಿವರಾದ ಆರ್.ಅಶೋಕ್ ಅವರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಾಮಾನ್ಯ ವಿಭಾಗಕ್ಕೆ ದಿಢೀರ್ ಭೇಟಿ ನೀಡಿ ಕಂದಾಯಕ್ಕೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದರು.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಕಾಲದಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಾರ್ವಜನಿಕರ ಅಹವಾಲು ಆಲಿಸಿದ ಸಚಿವರು, ಜಿಲ್ಲಾಧಿಕಾರಿ ಕಚೇರಿಯಿಂದ ಯಾವ ಕೆಲಸ ಆಗಬೇಕಿದೆ. ಅರ್ಜಿ ಸಲ್ಲಿಸಿ ಎಷ್ಟು ದಿನವಾಗಿದೆ. ಸತಾಯಿಸುತ್ತಿದ್ದಾರೆಯೇ ಎಂದು ಸಚಿವರು ಸಾರ್ವಜನಿಕರನ್ನು ಪ್ರಶ್ನಿಸಿದರು.

ಬಳಿಕ ಜಿಲ್ಲಾಡಳಿತ ಭವನದ ಎರಡನೇ ಮಹಡಿಯಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪ ವಿಭಾಗಾಧಿಕಾರಿ ಕಚೇರಿ, ಮಾಹಿತಿ ತಂತ್ರಜ್ಞಾನ ಕೇಂದ್ರ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ನಾನಾ ಇಲಾಖೆ ಅಧಿಕಾರಿಗಳು ಇದ್ದರು. ಬಳಿಕ ಕರ್ಣಂಗೇರಿಗೆ ಭೇಟಿ ನೀಡಿ, ಸಂತ್ರಸ್ತರಿಗಾಗಿ ನಿರ್ಮಿಸಲಾಗಿರುವ ಮನೆಗಳನ್ನು ಪರಿಶೀಲಿಸಿದರು.

See also  ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ತಂದೆ-ಮಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು