ಹುಬ್ಬಳ್ಳಿ: ಉತ್ತರ ಪ್ರದೇಶದ ಹಿಂದೂ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಪ್ರದೇಶದಿಂದ ಬಂದಿದ್ದ ವಿಶೇಷ ಪೊಲೀಸ್ ತಂಡವು ಪ್ರಕರಣದ ಪ್ರಮುಖ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ. ಈತ ಕೇಂದ್ರ ಸರ್ಕಾರದ ನೌಕರನಾಗಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.
ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳನ್ನು ಕಲೆ ಹಾಕಿದ ಬಳಿಕ ಉತ್ತರ ಪ್ರದೇಶದ ಪೊಲೀಸ್ ತಂಡವು ರಾಜ್ಯಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದೆ.