News Kannada
Thursday, March 30 2023

ಕರ್ನಾಟಕ

ವಿಧವಾ ಪುನರ್ ವಿವಾಹ ಯೋಜನೆಯ ಹಣ ಗುಳುಂ: ಪ್ರತಿಭಟನೆ

Photo Credit :

ವಿಧವಾ ಪುನರ್ ವಿವಾಹ ಯೋಜನೆಯ ಹಣ ಗುಳುಂ: ಪ್ರತಿಭಟನೆ

ಪಿರಿಯಾಪಟ್ಟಣ: ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು ಮತ್ತು ಕೆಲವು ಮಧ್ಯವರ್ತಿಗಳು ನಕಲಿ ದಾಖಲೆ ಸೃಷ್ಟಿಸಿ ಪರಿಶಿಷ್ಟ ಜಾತಿಯ ವಿಧವಾ ಪುನರ್ ವಿವಾಹ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಂಡಿದ್ದು, ಅವರ  ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಅಗ್ರಹಿಸಿ ವಿವಿಧ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮಹಿಳಾ ಸಬಲೀಕರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧವಾ ಪುನರ್ ವಿವಾಹ ಯೋಜನೆಯನ್ನು ಜಾರಿಗೊಳಿಸಿದ್ದು, ತಾಲೂಕಿನಲ್ಲಿಯೂ ಕೂಡ ಈ ಯೋಜನೆಗೆ ಸಾಕಷ್ಟು ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಫಲಾನುಭವಿಗಳ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿದ ಮಧ್ಯವರ್ತಿ ಲೋಕೇಶ್ ಹೊನ್ನೆನಳ್ಳಿ ಎಂಬಾತ ಫಲಾನುಭವಿಗಳಿಗೆ ತಿಳಿಯದೆ ಹಣವನ್ನು ದುರಪಯೋಗಪಡಿಸಿದ್ದು, ಈ ಅವ್ಯವಹಾರಕ್ಕೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡ ಮತ್ತು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಿಂಧ್ಯಾ ಅವರು ಸಹಕಾರ ನೀಡಿದ್ದು ಇದರಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂದು ಆರೋಪಿಸಿದರು.

ಈ ಅಕ್ರಮದಿಂದಾಗಿ ಪರಿಶಿಷ್ಟ ಜಾತಿಯ ಬಡ ಹೆಣ್ಣು ಮಕ್ಕಳಿಗೆ ಮೋಸದ ಜೊತೆಗೆ ಅವಮಾನವಾಗಿದ್ದು, ಸರ್ಕಾರ ಮತ್ತು ಇಲಾಖೆಗೂ ಕೂಡ ಮೋಸ ಮಾಡಿದ್ದಾರೆ. ಈ ಮೋಸದ ಬಗ್ಗೆ ಈಗಾಗಲೇ ಸರ್ಕಾರದ ಗಮನಕ್ಕೂ ತರಲಾಗಿದೆ. ಆದರೆ ಇಲ್ಲಿಯವರೆಗೂ ಯಾವುದೇ ಕಾನೂನು ಕ್ರಮಕೈಗೊಳ್ಳದಿರುವುದು ಅನುಮಾನಕ್ಕೆ ಎಡೆಮಾಡಿದೆ ಎಂದು ಅಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕರ್ತವ್ಯ ಲೋಪವೆಸಗಿ ಅವ್ಯವಹಾರ ನಡೆಸಿರುವ  ಭ್ರಷ್ಟಚಾರಿಗಳನ್ನು ಅತೀ ಶೀಘ್ರದಲ್ಲಿ ತನಿಖೆಗೊಳಪಡಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

See also  ಬಿಜೆಪಿ ಪಟ್ಟಿ ನೀಡಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್ ಹಾಕುತ್ತಿರುವ ಪೊಲೀಸ್ ಇಲಾಖೆ : ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು