ಮಡಿಕೇರಿ: ಕೊಡಗು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಅರ್ಥಪೂರ್ಣವಾಗಿ ನಡೆಯಿತು. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಕೂಡ ಗೌರವ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು ಬ್ರಿಟೀಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಧೈರ್ಯವಂತ ಮಹಿಳೆಯ ವೀರತನ ಎಲ್ಲರಿಗೂ ಸ್ಫೂರ್ತಿದಾಯಕವೆಂದರು.
ಕಾರ್ಯಕ್ರಮದಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ತಹಶೀಲ್ದಾರರಾದ ಮಹೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಮಣಜೂರು ಮಂಜುನಾಥ್ ಹಾಜರಿದ್ದರು.