News Kannada
Tuesday, September 27 2022

ಕರ್ನಾಟಕ

ಮಂಜೇಶ್ವರ: ವಿಧಾನಸಭೆ ಪ್ರವೇಶಿಸಿದ ಯುಡಿಎಫ್ ಅಭ್ಯರ್ಥಿ - 1 min read

Photo Credit :

ಮಂಜೇಶ್ವರ: ವಿಧಾನಸಭೆ ಪ್ರವೇಶಿಸಿದ ಯುಡಿಎಫ್ ಅಭ್ಯರ್ಥಿ

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಭರ್ಜರಿ ಗೆಲುವು ಸಾಧಿಸಿ ಮೊದಲ ಬಾರೀ ವಿಧಾನಸಭೆ ಪ್ರವೇಶಿಸಿದ್ದಾರೆ.

ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ ತಂತ್ರಿ ಕುಂಟಾರು ಅವರನ್ನು 7,923 ಮತಗಳ ಅಂತರದಿಂದ ಸೋಲಿಸಿದ ಖಮರುದ್ದೀನ್, ಎಲ್ಡಿಎಫ್ ಅನ್ನು ಮತ್ತೊಮ್ಮೆ ತೃತೀಯ ಸ್ಥಾನಕ್ಕೆ ತಳ್ಳಿದ್ದಾರೆ.

ಆರಂಭದಲ್ಲೇ ಮುನ್ನಡೆ ಸಾಧಿಸಿದ್ದ ಖಮರುದ್ದೀನ್ ಕೊನೆಯವರೆಗೂ ಅದನ್ನು ಕಾಯ್ದುಕೊಂಡರಲ್ಲದೇ, ಹಂತ ಹಂತವಾಗಿ ಮುನ್ನಡೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದರು. ಅಂತಿಮವಾಗಿ 65,407 ಮತಗಳನ್ನು ಗಳಿಸುವ ಮೂಲಕ 7,923 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ ತಂತ್ರಿ 57,484 ಮತಗಳನ್ನು ಗಳಿಸಿದ್ದರೆ, ಎಲ್ಡಿಎಫ್ ಅಭ್ಯರ್ಥಿ ಎಂ.ಶಂಕರ ರೈ 38,233 ಮತಗಳೊಂದಿಗೆ ತೃತೀಯ ಸ್ಥಾನಿಯಾದರು.

2016ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದ ಯುಡಿಎಫ್ ಈ ಸಲ ಭಾರೀ ಅಂತರದಿಂದ ಜಯಿಸುವ ಮೂಲಕ ಪ್ರಬಲವಾಗಿ ಹೊರಹೊಮ್ಮಿದೆ. ಕಳೆದ ಬಾರಿ ಪಿ.ಬಿ.ಅಬ್ದುರ್ರಝಾಕ್ ಅವರು ಬಿಜೆಪಿಯ ಕೆ. ಸುರೇಂದ್ರನ್ ವಿರುದ್ಧ ಕೇವಲ 89 ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದರು.

ಶಾಸಕರಾಗಿದ್ದ ಪಿ.ಬಿ.ಅಬ್ದುರ್ರಝಾಕ್ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿತ್ತು.

 

See also  ರೌಡಿ ಶೀಟರ್ ದೀಪು ಯಾನೆ ಡಿಂಗಾ ನ ಮೇಲೆ ಫೈರಿಂಗ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು