ಮಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಕಲ್ಲಿ ವಾಯುಭಾರ ಕುಸಿತ ಉಂಟಾಗಿದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಸಾರ್ವಜನಿಕರು ಈ ಅವಧಿಯಲ್ಲಿ ಸೂಕ್ತ ಮುಂಜಾಗೃತಾ ಕ್ರಮವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.