ಬೆಳ್ತಂಗಡಿ: ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಗುರುವಾರ ಮಧ್ಯಾಹ್ನ ಆಗಮಿಸಿದರು.
ಮೊದಲಿಗೆ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭ ಶ್ರೀ ಮೋಹನದಾಸ ಸ್ವಾಮೀಜಿ, ಸುರೇಂದ್ರ ಕುಮಾರ್, ಶಾಸಕ ಹರೀಶ ಪೂಂಜ ಜತೆಗಿದ್ದರು.