ನವದೆಹಲಿ: ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ ಮುಂದಿನ 12-36 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಸೈಷ್ಟಿಯಾಗಿರುವ ಕ್ಯಾರ್ ಚಂಡಮಾರುತದಿಂದ ಮಳೆಯಾಗುತ್ತಿದೆ. ಇದರಿಂದ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕ್ಯಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ.