ಮಡಿಕೇರಿ: ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಇಬನ್ನಿವಳವಾಡಿ ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಾಯಿ ಟರ್ಫ್ ಹಾಕಿ ಮೈದಾನದಲ್ಲಿ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ಧ್ವಜಾರೋಹಣ ಮಾಡಿ ಮಾತನಾಡಿದ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅವರು ಮಕ್ಕಳಲ್ಲಿ ಗೆಲ್ಲಬೇಕೆಂಬ ಛಲ ಇರಬೇಕು. ಸೋಲನ್ನು ಕಂಡವರು ಗೆಲುವನ್ನು ಕಾಣುತ್ತಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಸೋಲು ಗೆಲುವು ಎರಡನ್ನು ಸಮನಾಗಿ ಕಾಣಬೇಕು ಎಂದರು.
ಕ್ರೀಡೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಮಕ್ಕಳನ್ನು ಸದೃಢಗೊಳಿಸುತ್ತದೆ. ಕೊಡಗು ಜಿಲ್ಲೆ ದೇಶಕ್ಕೆ ತುಂಬಾ ಕ್ರೀಡಾಪಟುಗಳನ್ನು ಕೊಟ್ಟಿದೆ. ಅವರನ್ನು ಸ್ಪೂರ್ತಿಯಾಗಿಟ್ಟುಕೊಂಡು ನೀವು ಕೂಡ ಅವರಂತೆ ಕ್ರೀಡಾಕ್ಷೇತ್ರದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪೆರಿಗ್ರೀನ್ ಎಸ್.ಮಚ್ಚಾಡೋ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ, ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು, ಮಡಿಕೇರಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀನಿವಾಸ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎಸ್.ಟಿ.ವೆಂಕಟೇಶ್, ಮಡಿಕೇರಿ ಜನತಾ ಬಜಾರ್ ಅಧ್ಯಕ್ಷರಾದ ರವಿ ಬಸಪ್ಪ, ಕೆದಕಲ್ ಗ್ರಾ.ಪಂ.ಅಧ್ಯಕ್ಷರಾದ ಬಿ.ಎ.ಬಾಲಕೃಷ್ಣ ರೈ, ವಿರಾಜಪೇಟೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಬಿ.ರವಿ, ಜಿಲ್ಲಾ ದೈ.ಶಿ.ಶಿ. ಸಂಘದ ಅಧ್ಯಕ್ಷರಾದ ಪಿ.ಎ.ಪ್ರವೀಣ್, ಕ.ರಾ.ಸ.ಗ್ರೇಡ್-1, ದೈ.ಶಿ.ಶಿ ಸಂಘದ ಅಧ್ಯಕ್ಷರಾದ ಡಾ.ಸೋಮಯ್ಯ, ದೈ.ಶಿ.ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಆರ್. ಸುಬ್ಬಯ್ಯ, ಬೋಯಿಕೇರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪೂರ್ಣೇಶ್ ಬಿ.ಟಿ, ಎಸ್.ಡಿ.ಎಂ.ಸಿ.ಸ.ಮಾ.ಪ್ರಾ.ಶಾಲೆಯ ಅಧ್ಯಕ್ಷರಾದ ಆನಂದ್ ಎಚ್.ಎ, ಸ.ಮಾ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯರಾದ ರಾಜು ಎಚ್.ಆರ್, ಇತರರು ಪಾಲ್ಗೊಂಡಿದ್ದರು.