ಬೆಂಗಳೂರು: ರಾಜ್ಯದ ರೈಲ್ವೆ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಗೆ ಸಂಬಂಧಿಸಿದಂತೆ ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿಯವರ ಉಪಸ್ಥಿತಿಯಲ್ಲಿ ಇಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆ ನಡೆಸಿದರು.
ಸಂಸದರಾದ ಪಿ.ಸಿ.ಮೋಹನ್, ಬಿ.ವೈ.ರಾಘವೇಂದ್ರ, ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸಭೆಯಲ್ಲಿ ಹಾಜರಿದ್ದರು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ರೈಲ್ವೆ ಯೋಜನೆಗಳಿಗೆ ಅಗತ್ಯವಿರುವ ಭೂ ಸ್ವಾಧೀನ ಕಾರ್ಯವನ್ನು ಚುರುಕುಗೊಳಿಸಿ, ಜಮೀನನ್ನು ತ್ವರಿತವಾಗಿ ಹಸ್ತಾಂತರ ಮಾಡುವಂತೆ ಕೇಂದ್ರ ರೈಲ್ವೆ ರಾಜ್ಯ ಸಚಿವರು ಮುಖ್ಯ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.