News Kannada
Monday, September 26 2022

ಕರ್ನಾಟಕ

ಪಲಾರಗೋಳಿ ಗರಡಿ ಜೀರ್ಣೋದ್ಧಾರ: ಕೋಟ ಶ್ರೀನಿವಾಸ ಪೂಜಾರಿ ಭೇಟಿ - 1 min read

Photo Credit :

ಪಲಾರಗೋಳಿ ಗರಡಿ ಜೀರ್ಣೋದ್ಧಾರ: ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಬೆಳ್ತಂಗಡಿ: ಮರೋಡಿ ಗ್ರಾಮದ ಪಲಾರಗೋಳಿ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ಇದರ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗಿದ್ದು, ಸೋಮವಾರ ಮುಜರಾಯಿ, ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಬಳಿಕ ಗರಡಿಯ ಸಮಿತಿಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಗರಡಿಯ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಅನುದಾನ ದೊರಕಿಸಿಕೊಡುವ ಭರವಸೆ ನೀಡಿದರು. ಇದರ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಖುದ್ದಾಗಿ ಭಾಗವಹಿಸುವುದಾಗಿ ತಿಳಿಸಿದರು.

ಸಚಿವರಿಗೆ ಮನವಿ: ನೂರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಗರಡಿಯನ್ನು ಸುಮಾರು ₹ 1 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಗ್ರಾಮಸ್ಥರು ಶಕ್ತಿಮೀರಿ ಸಹಕಾರ ನೀಡುತ್ತಿದ್ದಾರೆ. ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಸಮಿತಿಯಿಂದ ಸಚಿವರಿಗೆ ಮನವಿ ನೀಡಲಾಯಿತು.

ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌, ಗರಡಿಯ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮ್‌ಪ್ರಸಾದ್‌, ಸದಾನಂದ ಪೂಜಾರಿ ಉಂಗಿಲಬೈಲ್‌, ತಾಲ್ಲೂಕು ಪಂಚಾಯಿತಿ ಸದಸ್ಯ ಸುಧೀರ್‌ ಆರ್‌.ಸುವರ್ಣ, ಮಹಾವೀರ ಆರಿಗ, ಗುತ್ತುಬರ್ಕೆಯ ಗುರಿಕಾರರು, ಸಮಿತಿ ಪದಾಧಿಕಾರಿಗಳು ಇದ್ದರು.

 

See also  ಶಿಕಾರಿಪುರದಲ್ಲಿ ಮೃತಪಟ್ಟವರಲ್ಲಿ ಇಬ್ಬರು ಮಾಗಡಿಯವರು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

154
Deepak Atavale

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು