ಬೆಂಗಳೂರು: ಕೆಪಿಎಲ್ ಟೂರ್ನಿಯಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ಬಳ್ಳಾರಿ ತಂಡದ ನಾಯಕ ಸಿಎಂ ಗೌತಮ್ ಮತ್ತು ಆಟಗಾರ ಅಬ್ರಾರ್ ಖಾಜಿಯಯನ್ನು ಬಂಧಿಸಿದ್ದಾರೆ.
ಅವರಿಬ್ಬರೂ 2019ರ ಕೆಪಿಎಲ್ ಟೂರ್ನಿಯ ಹುಬ್ಬಳ್ಳಿ ಮತ್ತು ಬಳ್ಳಾರಿ ನಡುವಿನ ಫೈನಲ್ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದರು ಎನ್ನಲಾಗಿದೆ.
ಈ ಸಂಬಂಧ ತನಿಖೆ ಚುರುಗೊಳಿಸಿದ ಸಿಸಿಬಿ ಪೊಲೀಸರು ಇಬ್ಬರು ಆಟಗಾರರನ್ನು ವಶಕ್ಕೆ ಪಡೆದಿದ್ದಾರೆ.