ನವದೆಹಲಿ: ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂವಿವಾದ ತೀರ್ಪಿಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆ ಉತ್ತರ ಪ್ರದೇಶ ಸೇರಿದಂತೆ ದೇಶದಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ನಲ್ಲಿ ಮಾಡಲಾಗುತ್ತಿದೆ.
ನ.17ರ ಳಗೆ ಅಯೋದ್ಯೆಯ ತೀರ್ಪು ಹೊರ ಬೀಳುವ ಸಾಧ್ಯತೆಯಿದ್ದು,. ಕೋಮುಗಲಭೆ ಉಂಟಾಗುವ ಲಕ್ಷ್ಮಣಗಳು ಹೆಚ್ಚಾಗಿರುವುದರಿಂದ ಅಯೋದ್ಯೆ ನಿವಾಸಿಗಳು ತಮ್ಮ ಕುಟುಂಬಗಳ ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುತ್ತಿದ್ದಾರೆ.
ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಮೀಸಲು ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗುತ್ತಿದೆ, ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ನಿಗಾ ವಹಿಸಿದೆ.