ಕಾಸರಗೋಡು: ಕನ್ನಡ ಶಾಲೆಗಳಲ್ಲಿ ಕನ್ನಡ ಅರಿಯದ ಅಧ್ಯಾಪಕರ ನೇಮಕಾತಿಯನ್ನು ರದ್ದುಪಡಿಸಬೇಕು ಹಾಗೂ ಕನ್ನಡ ಮಲಯಾಳಂ ಎಲ್ .ಡಿ.ಸಿ, ಪಿ.ಎಸ್.ಸಿ ಪರೀಕ್ಷೆಯಲ್ಲಿ ನಡೆದ ವಂಚನೆಯ ಬಗ್ಗೆ ತನಿಖೆ ನಡೆಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇಂದು ಕಾಸರಗೋಡು ಲೋಕಸೇವಾ ಆಯೋಗ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಿತು.
ಸತ್ಯಾಗ್ರಹವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಉದ್ಘಾಟಿಸಿದರು. ಲೋಕಸೇವಾ ಆಯೋಗ ಸಿಪಿಎಂ ಪಕ್ಷದ ಕಚೇರಿಯಾಗಿ ಪರಿವರ್ತನೆಗೊಂಡಿದೆ ಎಂದು ಆರೋಪಿಸಿದರು. ಜಿಲ್ಲಾ ಉಪಾಧ್ಯಕ್ಷ ಸತ್ಯಶಂಕರ ಭಟ್ ಅಧ್ಯಕ್ಷತೆ ವಹಿಸಿದ್ದರು.