News Kannada
Tuesday, September 27 2022

ಕರ್ನಾಟಕ

ಬಿಗ್‍ಬಾಸ್ ಸ್ಪರ್ಧಿ ಚೈತ್ರ ಕೊಟ್ಟೂರ್ ವಿರುದ್ಧ ಪ್ರತಿಭಟನೆ - 1 min read

Photo Credit :

ಬಿಗ್‍ಬಾಸ್ ಸ್ಪರ್ಧಿ ಚೈತ್ರ ಕೊಟ್ಟೂರ್ ವಿರುದ್ಧ ಪ್ರತಿಭಟನೆ

ರಾಮನಗರ: ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಚೈತ್ರ ಕೊಟ್ಟೂರ್ ಅವರು ಅವಹೇಳನಕಾರಿ ಪದಗಳನ್ನು ಬಳಸಿ ಶೋಷಿತ ಸಮುದಾಯಗಳ ಬಗ್ಗೆ ವ್ಯಂಗ್ಯವಾಡಿದ್ದಾರೆಂದು ಆರೋಪಿಸಿ ಅವರನ್ನು ಸರಣಿಯಿಂದ ಹೊರಕ್ಕೆ ಕಳುಹಿಸುವಂತೆ ಒತ್ತಾಯಿಸಿ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಬಿಡದಿಯ ಇನ್ನೋವೇಟಿವ್ ಫಿಲ್ಮ್ ಸಿಟಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ಬಿಡದಿಯಲ್ಲಿರುವ ಇನ್ನೋವೇಟಿವ್ ಫಿಲ್ಮ್ ಸಿಟಿ ಎದುರು ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಪಿ.ಮೂರ್ತಿ ನೇತೃತ್ವದಲ್ಲಿ ದಲಿತ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಜಮಾಯಿಸಿ ಬಿಗ್ ಬಾಸ್ ಸ್ಪರ್ಧಿ ಚೈತ್ರ ಕೊಟ್ಟೂರು ವಿರುದ್ಧ ಘೋಷಣೆಗಳನ್ನು ಕೂಗಿ, ಆಕೆಯ ಭಾವಚಿತ್ರವಿರುವ ಫ್ಲೆಕ್ಸ್ ಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ಮತ್ತು ಜಾತಿನಿಂದನೆ ಮಾಡಿರುವ ಚೈತ್ರ ಕೊಟ್ಟೂರು ಅವರನ್ನು ರಿಯಾಲಿಟಿ ಶೋನಿಂದ ಕೂಡಲೇ ಹೊರಕ್ಕೆ ಕಳುಹಿಸಬೇಕು. ಇಲ್ಲದಿದ್ದರೆ ಸೋಮವಾರ ಬಿಗ್ ಬಾಸ್ ಮನೆಗೆ ಮುತ್ತಿಗೆ ಹಾಕಿ ಚಳುವಳಿ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಚೈತ್ರ ಕೊಟ್ಟೂರು ಅವರನ್ನು ರಿಯಾಲಿಟಿ ಶೋನಿಂದ ಹೊರ ಹಾಕಬೇಕೆಂದು ಬಿಗ್ ಬಾಸ್ ಮನೆಯ ವ್ಯವಸ್ಥಾಪಕರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ವೇಳೆ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಪಿ.ಮೂರ್ತಿ ಮಾತನಾಡಿ, ಲೇಖಕಿಯಾಗಿರುವ ಚೈತ್ರ ಕೊಟ್ಟೂರು ಅವರು ಬಿಗ್ ಬಾಸ್ ಶೋನ 7ನೇ ಆವೃತ್ತಿಯ ಟಾಸ್ಕ್ ನಲ್ಲಿ ತಮ್ಮ ಸಹಸ್ಪರ್ಧಿ ಹರೀಶ್‍ರಾಜ್ ಜೊತೆ ಮಾತನಾಡುವ ಸಮಯದಲ್ಲಿ ನನ್ನ ಜೊತೆ ಓಡಾಡಲು ಕೆಲವರಿಗೆ ಇಷ್ಟವಿಲ್ಲ, ನನ್ನನ್ನು ಮುಟ್ಟಲು ಸಹ ಹಿಂಜರಿಯುತ್ತಾರೆ ನಾನೇನು ಅನ್ ಟಚೆಬಲ್ಲಾ? ಅಸ್ಪೃಶ್ಯಳೇ ಎಂದಿರುವುದು ಪ್ರಸಾರವಾಗಿದೆ. ಈ ರೀತಿ ಅವಹೇಳನಕಾರಿ ಪದಗಳನ್ನು ಪ್ರಸ್ತಾಪಿಸಿ ಮಾತನಾಡಿರುವುದು ಜಾತಿ ನಿಂದನೆಯಾಗಿದ್ದು, ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ. ಈ ಕೂಡಲೇ ಚೈತ್ರ ಕೊಟ್ಟೂರು ಅವರನ್ನು ಬಿಗ್‍ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಒತ್ತಾಯಿಸಿದರು.

ದಲಿತ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಯಾರೇ ಹೇಳಿಕೆ ನೀಡಿದರೂ ಅಂಬೇಡ್ಕರ್ ಸೇನೆ ಸಹಿಸುವುದಿಲ್ಲ, ದೇಶಕ್ಕೆ ಸಂವಿಧಾನವನ್ನು ರಚಿಸಿ ಕೊಟ್ಟ ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ದಲಿತ ಜನಾಂಗದ ವಿಚಾರದಲ್ಲಿ ಲಘುವಾಗಿ ಮಾತನಾಡಿದರೇ ಅಂತಹವರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದರು. ಚೈತ್ರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ತಿಳಿಸಿದರು.

See also  ಭಕ್ತರಿಗೆ ಮಾರ್ಗ ತೋರಿಸಿದ ಒಂಟಿ ಸಲಗ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು