ಚಾಮರಾಜನಗರ: ಕಾಡಾನೆ ದಾಳಿಗೆ ರೈತನೊಬ್ಬ ಸಾವನ್ನಪ್ಪಿದ ಘಟನೆ ತಾಲೂಕಿನ ಕಾಳಿಕಾಂಭ ಕಾಲೋನಿಯಲ್ಲಿ ನಡೆದಿದೆ.
ತಾಲೂಕಿನ ಕಾಡಂಚಿನ ಗ್ರಾಮವಾದ ಕಾಳಿಕಾಂಭ ಕಾಲೋನಿಯ ಜಮೀನಿನಲ್ಲಿ ವಾಸವಾಗಿದ್ದ ಕುಮಾರ(40) ಎಂಬಾತನೇ ಕಾಡಾನೆ ದಾಳಿಯಲ್ಲಿ ಮೃತಪಟ್ಟ ದುರ್ದೈವಿ. ರಾತ್ರಿ ವೇಳೆ ಮನೆಯ ಮುಂದೆ ರೋಷದಿಂದ ದಾಳಿ ನಡೆಸಿದೆ. ತಕ್ಷಣ ಆತನನ್ನು ಗ್ರಾಮಸ್ಥರು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ. ಮೃತನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ.
ಗ್ರಾಮದ ಸುತ್ತಮುತ್ತ ಕಾಡು ಪ್ರಾಣಿಗಳ ದಾಳಿಗಳು ನಡೆಯುತ್ತಲಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡುತ್ತಲೇ ಬಂದಿದ್ದೇವೆ. ಆದರೆ ಆರಣ್ಯ ಇಲಾಖೆಯವರು ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ದಾಳಿಗೆ ಮೂವರು ಬಲಿಯಾಗಿದ್ದಾರೆ. ಜೊತೆಗೆ ಸಾಕು ಪ್ರಾಣಿಗಳನ್ನು ಸಹ ತಿಂದಿರುವ ಘಟನೆಗಳು ನಡೆದಿದೆ. ಕಾಳಿಕಾಂಭ ಕಾಲೋನಿಯ ಸುತ್ತಮುತ್ತಲಿನ ರೈತರು ರೈತರಿಗೆ ಆರಣ್ಯ ಇಲಾಖೆಯು ರಕ್ಷಣೆ ನೀಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.