ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಕರಡಿಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹಗಲು ಹೊತ್ತಿನಲ್ಲೇ ಕರಡಿ ರಾಜಾರೋಷವಾಗಿ ನಿಟ್ಟೂರು ಗ್ರಾಮದ ರಸ್ತೆಯಲ್ಲಿ ನಡೆದು ಬರುತ್ತಿರುವುದನ್ನು ಸ್ಥಳೀಯರೊಬ್ಬರು ಮೊಬೈಲ್‍ನಲ್ಲಿ ವಿಡಿಯೋ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಗ್ರಾಮದಲ್ಲಿ ಕರಡಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಾಡಾನೆ ಮತ್ತು ಹುಲಿ ದಾಳಿಯಿಂದ ಕಂಗೆಟ್ಟಿದ್ದ ಊರಿನ ಜನ ಇದೀಗ ಕರಡಿಯ ಆಗಮನದಿಂದ ಮತ್ತಷ್ಟು ಭಯ ಭೀತರಾಗಿದ್ದಾರೆ.