ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲತಾ ಅವರ ಸಾಧನೆಗೆ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ಲಭಿಸಿದೆ.
ಹಿಂದಿಯಲ್ಲಿ ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿಯಾಗಿದ್ದಾರೆ.