ರಾಯಚೂರು: ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತಯಾರಾಗಿರುವ ಬಿಜೆಪಿಗೆ ನೈತಿಕತೆ ಇಲ್ಲ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದರು.
ಕಾಂಗ್ರೆಸ್ ಇಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಸುಪ್ರೀಂಕೋರ್ಟ್ ಶಾಸಕರನ್ನು ಅನರ್ಹಗೊಳಿಸಿರುವ ನಿರ್ಧಾರವು ಸರಿ ಎಂದು ಹೇಳಿದೆ. ಹೀಗಾಗಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಿಜೆಪಿಗೆ ನೈತಿಕತೆ ಇಲ್ಲ. ಸರ್ಕಾರ ಉರುಳಿಸಲು ಇವರೆಲ್ಲರೂ ಷಡ್ಯಂತ್ರ ರೂಪಿಸಿದ್ದರು. ಸುಪ್ರೀಂಕೋರ್ಟ್ ನ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಅವರು ಹೇಳಿದರು.