ನವದೆಹಲಿ: ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿ ಇಂದು ಆದೇಶ ಹೊರಡಿಸಿದೆ.
ಮರುಪರಿಶೀಲನಾ ಅರ್ಜಿಗೆ ಯಾವುದೇ ಆಧಾರವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ರಫೇಲ್ ಯುದ್ಧವವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ , ಕೆ.ಎಂ.ಜೋಸೆಫ್ ಅವರಿದ್ದ ನ್ಯಾಯಪೀಠ ತೀರ್ಪು ಹೊರಡಿಸಿ ಅರ್ಜಿಯನ್ನು ವಜಾ ಮಾಡಿದೆ.