ಕಂಪ್ಲಿ: ಟೀ ಮಾರಿ ಜೀವನ ಸಾಗಿಸುತ್ತಿದ್ದ ಸಾಮಾನ್ಯ ಮಹಿಳೆಯೊಬ್ಬರು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ ಘಟನೆ ನಡೆದಿದೆ.
ಸ್ಥಳೀಯ ಪುರಸಭೆ ಚುನಾವಣೆಯಲ್ಲಿ 12ನೇ ವಾರ್ಡ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗುಡದಮ್ಮ ಸ್ಪರ್ಧಿಸಿದ್ದರು. ಗುರುವಾರ ನಡೆದ ಮತ ಎಣಿಕೆಯಲ್ಲಿ 431 ಮತಗಳ ಅಂತರಲ್ಲಿ ಗೆಲುವು ಪಡೆದುಕೊಂಡಿದ್ದಾರೆ.
ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪ್ರೌಢಶಾಲೆ ಬಳಿ ಒಂದು ವರ್ಷದಿಂದ ಟೀ ಅಂಗಡಿ ನಡೆಸುತ್ತಿದ್ದು, ಪತಿ ಶ್ರೀನಿವಾಸ್ ಆಟೊ ಓಡಿಸುತ್ತಿದ್ದಾರೆ. ಇಬ್ಬರ ದುಡಿಮೆಯಿಂದ ಬಂದ ಆದಾಯದಲ್ಲಿ ಇಬ್ಬರು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ.