ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರಬ್ ಗಂಗೂಲಿ ಅವರ ವಿರುದ್ಧ ದಾಖಲಾಗಿದ್ದ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ದೂರನ್ನು ಪರಿಶೀಲಿಸಿದ ನೀತಿ ಅಧಿಕಾರಿ ಡಿ.ಕೆ. ಜೈನ್ ಕೈಬಿಟ್ಟಿದ್ದಾರೆ.
ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಅಜೀವ ಸದಸ್ಯ ಸಂಜೀವ್ ಗುಪ್ತಾ ಅವರು ‘ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದುಕೊಂಡು ಬಿಸಿಸಿಐಗೂ ಅಧ್ಯಕ್ಷರಾಗಿರುವ ಗಂಗೂಲಿ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘಿಸಿದ್ದಾರೆ’ ಎಂದು ದೂರು ನೀಡಿದ್ದರು.
ದೂರು ಪರಿಶೀಲಿಸಿದ ಡಿ.ಕೆ.ಜೈನ್ ಅವರು ಗಂಗೂಲಿ ಅವರು ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿ ದೂರು ವಜಾ ಮಾಡಿದ್ದಾರೆ.