News Kannada
Thursday, September 29 2022

ಕರ್ನಾಟಕ

ಉಪಚುನಾವಣೆ ಫಲಿತಾಂಶ ಬಳಿಕ ಸರ್ಕಾರ ಪತನ: ಕುಮಾರಸ್ವಾಮಿ - 1 min read

Photo Credit :

ಉಪಚುನಾವಣೆ ಫಲಿತಾಂಶ ಬಳಿಕ ಸರ್ಕಾರ ಪತನ: ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಸರ್ಕಾರ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಸೋಮವಾರ ಜೆಡಿಎಸ್ ಅಭ್ಯರ್ಥಿ ಎಂ.ಕೃಷ್ಣಾರೆಡ್ಡಿ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಭಾಗವಹಿಸಿದ ಕುಮಾರಸ್ವಾಮಿ ಅವರು, ಸುಧಾಕರ್ ಅವರು ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಎಷ್ಟು ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಜನರು ಕೇಳಲಿ. ನನಗೆ ಮತ್ತು ಸಿದ್ದರಾಮಯ್ಯ ಅವರಿಗೆ ಸುಧಾಕರ್ ಟೋಪಿ ಹಾಕಿದರು ಎಂದರು.

ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರು ನಾಮಪತ್ರ ಸಲ್ಲಿಸುವ ಮೊದಲು ನಡೆದ ಮೆರವಣಿಗೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣ ಮೊದಲಾದವರು ಸಾಥ್ ನೀಡಿದರು.

ಬಿಜೆಪಿ ಅಭ್ಯರ್ಥಿ ಮೆರವಣಿಗೆಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು, ಸರ್ಕಾರದ ಮೇಲೆ ಶಾಸಕರ ಋಣವಿದೆ. ಅದನ್ನು ನಾವು ತೀರಿಸುತ್ತೇವೆ. ಸುಧಾಕರ್ ಅವರನ್ನು ನಾವು ಸಚಿವರನ್ನಾಗಿ ಮಾಡುತ್ತೇವೆ ಎಂದರು.

See also  ಅಬಕಾರಿ ಅಕ್ರಮ ತಡೆಗೆ ಕ್ರಮ: ಮಾಹಿತಿ ನೀಡಲು ಅಬಕಾರಿ ಉಪ ಆಯುಕ್ತರ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು