ನವದೆಹಲಿ: ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಶಿವಸೇನಾ ನೇತೃತ್ವದ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಶರದ್ ಪವಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಂಜತ್ ರಾವತ್ ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಶಿವಸೇನಾ ಸರ್ಕಾರ ರಚನೆಯಾಗಲಿದೆ. ಶಿವಸೇನೆ ಸ್ಥಿರ ಹಾಗೂ ಪರಿಣಾಮಕಾರಿಯಾಗಿ ಸರ್ಕಾರ ನಡೆಸಲಿದೆ. ಉದ್ಧವ್ ಠಾಕ್ರೆ ಅವರು ಸರ್ಕಾರ ನಡೆಸಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದರು.
ಶಿವಸೇನೆ ದೇಶದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಮ್ಮಲ್ಲಿ 18 ಸಂಸದರಿದ್ದು ನಾವೇ ಸರ್ಕಾರವನ್ನು ರಚಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.