News Kannada
Wednesday, September 28 2022

ಕರ್ನಾಟಕ

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಬೇಕು: ಶಿಕ್ಷಣಾಧಿಕಾರಿ ಮಚ್ಚಾಡೋ ಸಲಹೆ - 1 min read

Photo Credit :

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಬೇಕು: ಶಿಕ್ಷಣಾಧಿಕಾರಿ ಮಚ್ಚಾಡೋ ಸಲಹೆ

ಮಡಿಕೇರಿ: ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಆಭಿಯಾನ, ಕರ್ನಾಟಕ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ಆವಿಷ್ಕಾರ ಯೋಜನೆಯಡಿ ಮಕ್ಕಳ ವಿಜ್ಞಾನ ಹಬ್ಬ-2019ರ ಪ್ರಯುಕ್ತ ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ಸಂಪನ್ಮೂಲ ತರಬೇತಿ ಕಾರ್ಯಗಾರವು ಮಂಗಳವಾರ ನಡೆಯಿತು. 

ಕಾರ್ಯಗಾರ ಉದ್ಘಾಟಿಸಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಅವರು ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ, ತಾರ್ಕಿಕತೆ ಹಾಗೂ ಪ್ರಶ್ನಿಸುವ ಮನೋಭಾವ ಬೆಳೆಸುವ ಮೂಲಕ  ಅವರಲ್ಲಿ ಸಂತಸದ ಕಲಿಕೆ ಹಾಗೂ ಕುತೂಹಲ ಕೆರಳಿಸುವ ಚಟುವಟಿಕೆಯಾಧರಿತ ಕಲಿಕೆಗೆ ಶಿಕ್ಷಕರು  ಪ್ರೇರೇಪಣೆ  ನೀಡಬೇಕು ಎಂದರು.

ಪ್ರತಿ ಮಗು ಕೂಡ ಅನನ್ಯವಾದ ಪ್ರತಿಭೆ ಮತ್ತು ಚೈತನ್ಯ ಹೊಂದಿದೆ. ಎಲ್ಲಾ ಮಕ್ಕಳು ಕಲಿಯುವ ಮತ್ತು ಎಲ್ಲರೂ ಬೆಳೆಯುವ ಉದ್ದೇಶದಿಂದ ಮಕ್ಕಳ ಕಲಿಕೆಗೆ ಪೂರಕವಾದ ಚಟುವಟಿಕೆಗಳ ಮೂಲಕ ಮಕ್ಕಳು ತಮ್ಮ ತಮ್ಮಲ್ಲಿ ಚರ್ಚೆ, ತಾರ್ಕಿಕವಾಗಿ ಆಲೋಚಿಸಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮಾರ್ಗಗಳನ್ನು ತಾವೇ ಕಂಡುಕೊಳ್ಳಲು ಈ ಹಬ್ಬ ಸಹಕಾರಿಯಾಗಿದೆ. ಮಕ್ಕಳ ಪ್ರಶ್ನೆಯು ಪ್ರಜ್ಞೆಯಾಗಿ ಬೆಳೆದು  ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಮಚ್ಚಾಡೋ ಅವರು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಂಯೋಜಕರಾದ ಟಿ.ಜಿ.ಪ್ರೇಮಕುಮಾರ್, ಮಕ್ಕಳ ವಿಜ್ಞಾನ ಹಬ್ಬ ಏಕೆ? ಹೇಗೆ? ಎಂಬ ಉದ್ದೇಶ ತಿಳಿಸಿದರು.

ಈ ಹಬ್ಬವು ಮಕ್ಕಳಲ್ಲಿ ಸೃಜನಶೀಲ ಮತ್ತು ಸಂತಸದ ಕಲಿಕೆಗೆ ಪೂರಕವಾಗಿ ಸರ್ಕಾರಿ ಶಾಲೆಗಳನ್ನು  ಆಕರ್ಷಿಸುವ ಮೂಲಕ  ಜನ ಸಮುದಾಯ ಬಳಸಿಕೊಂಡು ಶಿಕ್ಷಣ ಬಲಪಡಿಸಲು ಸಹಕಾರಿಯಾಗಿದೆ ಎಂದರು.

See also  ಮತ್ತೆ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಎಚ್. ವಿಶ್ವನಾಥ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು