News Kannada
Monday, October 03 2022

ಕರ್ನಾಟಕ

ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ - 1 min read

Photo Credit :

ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಡಿಕೇರಿ: ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.

ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ.

ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್‍ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್‍ಗೆ ಸ್ಕ್ರೀನ್‍ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.

ಇದನ್ನು ಗಮನಿಸಿದ ಜೈಲು ಸಿಬ್ಬಂದಿ ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ ದಾರಿ ಮಧ್ಯೆಯೇ ಸಿದ್ದರಾಜುವಿನ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಜೈಲಿನ ಅಧಿಕಾರಿಗಳು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

See also  ಮಂಗಗಳ ಕಾಟದಿಂದ ಬೇಸತ್ತ ಜನರಿಂದ ವಿನೂತನ ಪ್ರತಿಭಟನೆ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು