ಬೆಂಗಳೂರು: ಅನರ್ಹಗೊಂಡ ಶಾಸಕರಿಗೆ ಬಿಜೆಪಿ ಪಕ್ಷದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದರು.
ವಿಧಾನಸಭಾ ಉಪಚುನಾವಣೆ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್ ಪರ ಪ್ರಚಾರ ಕೈಗೊಂಡ ವೇಳೆ ಮಾತನಾಡಿದ ಅವರು. ಎಲ್ಲ ಅನರ್ಹ ಶಾಸಕರ ಗೆಲುವಿಗೆ ಜತೆಯಾಗಿದ್ದು, ಇವರೆಲ್ಲರೂ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟಕ್ಕೆ ಹೋಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಭಿವೃದ್ಧಿಯೇ ಬಿಜೆಪಿಯ ಧ್ಯೇಯವಾಕ್ಯವಾಗಿದ್ದು, ನಾವು ಅಭಿವೃದ್ಧಿ ಕೆಲಸ ಬಗ್ಗೆ ಮಾತ್ರ ಮಾತನಾಡುತ್ತೇವೆ ಎಂದರು.